ಭಾನುವಾರ, ಜೂನ್ 13, 2021
21 °C

ಕಾವೇರಿ ನೀರು: ಸುಪ್ರೀಂಗೆ ತಮಿಳುನಾಡು ಮೊರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಪುನಃ ತಗಾದೆ ತೆಗೆದಿರುವ ತಮಿಳುನಾಡು, ನಿಗದಿ ಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಬಳಕೆ ಮಾಡಿಕೊಳ್ಳದಂತೆ ಕರ್ನಾಟಕಕ್ಕೆ ಸೂಚಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಲೇರಿದೆ.ಕರ್ನಾಟಕ ಹೆಚ್ಚಿನ ನೀರನ್ನು ಬಳಕೆ ಮಾಡಿಕೊಂಡರೆ, ತನ್ನ ಕೃಷಿ ಚಟುವಟಿಕೆಗೆ ತೊಂದರೆ ಆಗುತ್ತದೆ ಎನ್ನುವ ಕಾರಣವನ್ನು ತಮಿಳುನಾಡು ನೀಡಿದೆ.ಹಾಗಾಗಿ ಕಾವೇರಿ ಕಣಿವೆಯಲ್ಲಿ ಕರ್ನಾಟಕದಲ್ಲಿ ಬೇಸಿಗೆ ಬೆಳೆಗಳನ್ನು ಬೆಳೆಯಂತೆ ನಿರ್ಬಂಧ ಹೇರುವಂತೆ ಮಧ್ಯಂತರ ಅರ್ಜಿಯಲ್ಲಿ ಕೋರಿದೆ. ಬೇಸಿಗೆಯಲ್ಲಿ ಪೂರ್ಣ ಪ್ರಮಾಣದ ನೀರನ್ನು ಬಳಸಿಕೊಳ್ಳುವುದರಿಂದ ಜಲಾಶಯಗಳು ಬರಿದಾಗುತ್ತವೆ. ಇದರಿಂದ ತಮಿಳುನಾಡು ನಷ್ಟ ಅನುಭವಿಸಬೇಕಾಗುತ್ತದೆ. ಕರ್ನಾಟಕದ ಈ ಕ್ರಮ 2007ರ ಫೆಬ್ರುವರಿಯಲ್ಲಿ ಕಾವೇರಿ ನ್ಯಾಯಮಂಡಳಿ ನೀಡಿದ್ದ ತೀರ್ಪಿಗೆ ವಿರುದ್ಧ ಎಂದೂ ವಾದಿಸಿದೆ.ನ್ಯಾಯಮಂಡಳಿಯ ತೀರ್ಪಿನ ಅನ್ವಯ ಕರ್ನಾಟಕ ತನ್ನ ಪಾಲಿನ 103.24 ಟಿಎಂಸಿ ನೀರನ್ನು ಕೆಆರ್‌ಎಸ್, ಕಬಿನಿ, ಹೇಮಾವತಿ ಹಾಗೂ ಹಾರಂಗಿ ಜಲಾಶಯಗಳಿಂದ ಬಳಸಿಕೊಳ್ಳಬಹುದಾಗಿದೆ. ಆದರೆ ವಾಸ್ತವದಲ್ಲಿ ಕರ್ನಾಟಕ ತನ್ನ ಪಾಲಿನ ನೀರಿನ ಪ್ರಮಾಣಕ್ಕಿಂತ ಹೆಚ್ಚಿನ ನೀರು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪ ಮಾಡಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.