ಕಾವೇರಿ ನೀರು ಹಂಚಿಕೆ ವಿವಾದ

7

ಕಾವೇರಿ ನೀರು ಹಂಚಿಕೆ ವಿವಾದ

Published:
Updated:
ಕಾವೇರಿ ನೀರು ಹಂಚಿಕೆ ವಿವಾದ

ಮಂಡ್ಯ: ಕಾವೇರಿ ವಿಷಯ ಕುರಿತಂತೆ ಲೋಕಸಭೆಯಲ್ಲಿ ಚರ್ಚಿಸಲು ಅವಕಾಶ ನೀಡಬೇಕು ಎಂದು ಲೋಕಸಭಾಧ್ಯಕ್ಷೆ ಮೀರಾಕುಮಾರ್ ಅವರಲ್ಲಿ ಮನವಿ ಮಾಡಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.ಕಾವೇರಿ ಕಣಿವೆಯಲ್ಲಿನ ವಸ್ತುಸ್ಥಿತಿ ಅಧ್ಯಯನ ಮಾಡಲು ಆಗಮಿಸಿದ್ದ ಕೇಂದ್ರದ ತಂಡಕ್ಕೆ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಅಧಿವೇಶನದಲ್ಲಿ ಈ ಕುರಿತು ಸಮಗ್ರ ಚರ್ಚೆಗೆ ಅವಕಾಶ ಕೋರಲಾಗಿದೆ ಎಂದರು.ತಮಿಳುನಾಡು ಸರ್ಕಾರವು, ಕರ್ನಾಟಕವೇ ನೀರು ಬಿಡುತ್ತಿಲ್ಲ ಎಂಬಂತೆ ದೇಶದ ಜನರ ಮುಂದೆ ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ತೊಡೆದು ಹಾಕಿ, ವಾಸ್ತವ ಸ್ಥಿತಿಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ತಿಳಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.ಇದಕ್ಕೂ ಮುನ್ನ ಕೇಂದ್ರ ತಂಡದ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರು, ಸಧ್ಯದ ಬೆಳೆಗೆ ಇರುವ ನೀರಿನ ಕೊರತೆ ಮುಂತಾದ ವಿಷಯಗಳನ್ನು ವಿವರಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry