ಭಾನುವಾರ, ಮೇ 16, 2021
22 °C

ಕಾವೇರಿ ನ್ಯಾಯ ಮಂಡಳಿ ಅಧ್ಯಕ್ಷರ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ರಚಿಸಲಾಗಿರುವ ನ್ಯಾಯ ಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಎನ್.ಪಿ. ಸಿಂಗ್ ಅವರು ಅನಾರೋಗ್ಯದ ಕಾರಣ ರಾಜೀನಾಮೆ ಸಲ್ಲಿಸಿದ್ದಾರೆ.80 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ಅವರು, ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಬುಧವಾರ ಸಲ್ಲಿಸಿದ್ದಾರೆ ಎನ್ನಲಾಗಿದೆ.ತಮಿಳುನಾಡು-ಕರ್ನಾಟಕ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿಚಾರದಲ್ಲಿ ವಿವಾದ ಉಂಟಾದ ಕಾರಣ 1990ರಲ್ಲಿ ಈ ನ್ಯಾಯ ಮಂಡಳಿಯನ್ನು ನ್ಯಾಯಮೂರ್ತಿ ಚಿತ್ತತೋಷ್ ಮುಖರ್ಜಿ ಅವರ ನೇತೃತ್ವದಲ್ಲಿ ರಚಿಸಲಾಯಿತು. ಮುಖರ್ಜಿ 1995ರಲ್ಲಿ ರಾಜೀನಾಮೆ ನೀಡಿದ ಕಾರಣ ನ್ಯಾಯಮೂರ್ತಿ ಎನ್.ಪಿ. ಸಿಂಗ್ ಅವರನ್ನು ನ್ಯಾಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.