ಕಾವೇರಿ: ಬಿಎಸ್‌ಎನ್‌ಎಲ್ ಕಚೇರಿಗೆ ಮುತ್ತಿಗೆ

7

ಕಾವೇರಿ: ಬಿಎಸ್‌ಎನ್‌ಎಲ್ ಕಚೇರಿಗೆ ಮುತ್ತಿಗೆ

Published:
Updated:

ಕುಶಾಲನಗರ: ಕಾವೇರಿ ವಿವಾದವನ್ನು ಇತ್ಯರ್ಥಪಡಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಪಡೆಯ ಜಿಲ್ಲಾಧ್ಯಕ್ಷ ಎಂ.ಕೃಷ್ಣ ನೇತೃತ್ವದಲ್ಲಿ ಕಾವಲುಪಡೆಯ ಕಾರ್ಯಕರ್ತರು ಸೋಮವಾರ ಕುಶಾಲನಗರ ಪಟ್ಟಣದಲ್ಲಿ ಬಿಎಸ್‌ಎನ್‌ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರುರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ಅ. 12 ಕ್ಕೆ ಮುಂದೂ ಡಲ್ಪಟ್ಟ ಹಿನ್ನಲೆಯಲ್ಲಿ ಕಾವಲುಪಡೆಯ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕಾವೇರಿ ಮಧ್ಯಂತರ ಅರ್ಜಿ ವಿಚಾರಣೆಯನ್ನು ಉದ್ದೇಶ ಪೂರ್ವಕವಾಗಿ ಮುಂದೂಡ ಲಾಗಿದೆ ಎಂದು ಕೃಷ್ಣ ದೂರಿದರು.ರಾಜ್ಯದ ಜಲಾಶಯಗಳಲ್ಲಿ ಉಳಿದಿರುವ ನೀರನ್ನು ತಮಿಳುನಾಡಿಗೆ ಬಿಡಬಾರದು ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry