ಚಾಮರಾಜನಗರ: `ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರಿನ ಸಮಸ್ಯೆ ಇಲ್ಲ. ಆದರೆ, ಎರಡೂ ರಾಜ್ಯದ ರಾಜಕಾರಣಿಗಳೇ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ~ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಗುರುವಾರ ವಿಷಾದಿಸಿದರು.

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿಗೆ ಸೇರಿದ ತಾಳವಾಡಿ ಗ್ರಾಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ತಾಳವಾಡಿ-ಫಿರ್ಕಾ ತಾಲ್ಲೂಕು ಯೂನಿಯನ್ ಹಾಗೂ ಕನ್ನಡಪರ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಭಾಷಾ ಭಾವೈಕ್ಯ ಸಮಾವೇಶ ಹಾಗೂ ಹೊರನಾಡ ಕನ್ನಡಿಗರ ಸಂಸ್ಕೃತಿ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.

`ಭಾಷೆ ಅಭಿವ್ಯಕ್ತಿಯ ಮಾಧ್ಯಮ. ಅದು ಸಂಘರ್ಷದ ಸಂತೇಕವಾಗಬಾರದು. ನದಿ ನೀರು ವಿವಾದದಿಂದ ಭಾಷಾ ಸಾಮರಸ್ಯಕ್ಕೆ ಧಕ್ಕೆಯಾಗುವುದು ಸರಿಯಲ್ಲ. ತಾಳವಾಡಿಯಲ್ಲಿ ಕನ್ನಡಿಗರು ಹಾಗೂ ತಮಿಳು ಭಾಷಿಕರು ಅನೋನ್ಯವಾಗಿದ್ದಾರೆ. ಭಾಷಾ ಭಾವೈಕ್ಯಕ್ಕೆ ಇದಕ್ಕಿಂತ ನಿದರ್ಶನ ಬೇಕಿಲ್ಲ~ ಎಂದರು.

ಚಿತ್ರನಟ ಶಿವರಾಜ್ ಕುಮಾರ್ ಮಾತನಾಡಿ, `ನಾವೆಲ್ಲರೂ ಭಾರತೀಯರು. ಒಂದೇ ಎನ್ನುವ ಭಾವನೆಯಿಂದ ಬದುಕಬೇಕು. ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಿಕೊಳ್ಳುವುದು ಎರಡು ರಾಜ್ಯದ ಸರ್ಕಾರಗಳ ಜವಾಬ್ದಾರಿ. ಹೀಗಾಗಿ, ಭಾಷಾ ಸಂಘರ್ಷಕ್ಕೆ ಅವಕಾಶ ನೀಡಬಾರದು~ ಎಂದು ಸಲಹೆ ನೀಡಿದರು.

ತಮಿಳುನಾಡಿನ ಭವನಿಸಾಗರ ಕ್ಷೇತ್ರದ ಶಾಸಕ ಪಿ.ಎಲ್.ಸುಂದರಂ ಮಾತನಾಡಿ, `ತಾಳವಾಡಿಯಲ್ಲಿ ತಮಿಳರು ಮತ್ತು ಕನ್ನಡಿಗರು ಸೌಹಾರ್ದದಿಂದ ಬದುಕುತ್ತಿದ್ದಾರೆ. ಕನ್ನಡಿಗರಿಗೆ ತಾರತಮ್ಯ ಮಾಡದೆ ಸರ್ಕಾರದಿಂದ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಜನರ ಬಹುದಿನದ ಬೇಡಿಕೆಯಂತೆ ತಾಳವಾಡಿಯನ್ನು ತಾಲ್ಲೂಕು ಕೇಂದ್ರ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು~ ಎಂದು ಭರವಸೆ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, `ಹೊರನಾಡ ಕನ್ನಡಿಗರ ಸಮಸ್ಯೆ ಪರಿಹರಿಸಲು ಸದನ ಸಮಿತಿ ರಚಿಸಲಾಗಿದೆ.ಸಮಾವೇಶದಲ್ಲಿ ಜನರ ಹಕ್ಕೊತ್ತಾಯ ಮಂಡಿಸಲಾಗುವುದು. ಇದನ್ನು ಸಮಿತಿ ಮುಂದೆಯೂ ಮಂಡಿಸುತ್ತೇವೆ. ಬಳಿಕ ಎರಡು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೂಲ ಸೌಲಭ್ಯ ಕಲ್ಪಿಸಲು ಪ್ರಾಧಿಕಾರ ಬದ್ಧವಾಗಿದೆ~ ಎಂದು ಹೇಳಿದರು.

ಸಮಾವೇಶಕ್ಕೂ ಮೊದಲು ಹಮ್ಮಿಕೊಂಡಿದ್ದ ಕರ್ನಾಟಕ ಹಾಗೂ ತಮಿಳುನಾಡು ಜನಪದ ಕಲಾ ತಂಡಗಳ ಬೃಹತ್ ಮೆರವಣಿಗೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್. ಸುರೇಶ್ಕುಮಾರ್ ಚಾಲನೆ ನೀಡಿದರು. ಸಾಹಿತಿ ಡಾ.ಹಂಪ ನಾಗರಾಜಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.