ಸೋಮವಾರ, ಏಪ್ರಿಲ್ 19, 2021
25 °C

ಕಾವ್ಯಾನಂದ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್, ನಾಟಕ ಅಥವಾ ನಾಟಕ ವಿಮರ್ಶೆಗೆ ನೀಡಲಾಗುವ ‘ಕಾವ್ಯಾನಂದ ಪುರಸ್ಕಾರ’ಕ್ಕೆ ಕೃತಿಗಳನ್ನು ಆಹ್ವಾನಿಸಿದೆ.2010ರಲ್ಲಿ ಪ್ರಕಟವಾದ ನಾಟಕ ಅಥವಾ ನಾಟಕ ವಿಮರ್ಶೆಗೆ ನೀಡಲಾಗುವ ಈ ಪುರಸ್ಕಾರ 25 ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಟ್ರಸ್ಟ್‌ನ ಅಧ್ಯಕ್ಷರಾದ ವಿಜಯಾ ನಂದೀಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಕೃತಿಯ ನಾಲ್ಕು ಪ್ರತಿಗಳನ್ನು ‘ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್, ಶ್ರೀಗಿರಿ, 4/5ಎ, ಅಲಿ ಆಸ್ಕರ್ ರಸ್ತೆ, ಬೆಂಗಳೂರು- 560 052’ ಈ ವಿಳಾಸಕ್ಕೆ ಜುಲೈ 31ರೊಳಗೆ ಕಳುಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.ಹೆಚ್ಚಿನ ಮಾಹಿತಿಗೆ 080-2226 4361 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.