ಸೋಮವಾರ, ಮೇ 17, 2021
22 °C

ಕಾಶ್ಮೀರ: ಪ್ರತ್ಯೇಕತಾವಾದಿಗಳಿಂದ ಇನ್ಸ್‌ಪೆಕ್ಟರ್‌ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ (ಐಎಎನ್‌ಎಸ್): ಪ್ರತ್ಯೇಕತಾವಾದಿ ಗೆರಿಲ್ಲಾಗಳು ಗುಂಡಿನ ದಾಳಿ ನಡೆಸಿ ಸಹಾಯಕ ಸಬ್-ಇನ್ಸ್‌ಪೆಕ್ಟರ್‌ ಸುಖಪಾಲ್ ಸಿಂಗ್ ಅವರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿಯಾದ ಶ್ರೀನಗರದಲ್ಲಿ ಶುಕ್ರವಾರ ನಡೆದಿದೆ.ಪ್ರತ್ಯೇಕತಾವಾದಿ ಗೆರಿಲ್ಲಾಗಳು ಸಮೀಪದಿಂದ ಗುಂಡು ಹಾರಿಸಿದ ಪರಿಣಾಮ ದೇಹದಲ್ಲಿ ಎರಡು ಗುಂಡುಗಳು ಹೊಕ್ಕು ಗಂಭೀರವಾಗಿ ಗಾಯಗೊಂಡಿದ್ದ ಸಿಂಗ್ ಅವರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಅವರು ಬದುಕುಳಿಯಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಆದರೆ ಇವರೆಗೆ ಯಾವುದೇ ಪ್ರತ್ಯೇಕತಾವಾದಿಗಳ ಗುಂಪು ದಾಳಿ ಹೊಣೆ ಹೊತ್ತಿಲ್ಲ.ವಸಂತ ಋತುವಿನ ಹಿನ್ನೆಲೆಯಲ್ಲಿ ಕಾಶ್ಮೀರ ಕಣಿವೆ ಮಾರ್ಗವನ್ನು ತೆರೆದಿದ್ದು, ಇದರಿಂದಾಗಿ ವಿಧ್ವಂಸಕ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಕಣಿವೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.