ಮಂಗಳವಾರ, ಜನವರಿ 21, 2020
28 °C

ಕಾಶ್ಮೀರ ಯುದ್ಧದ ಕೇಂದ್ರಬಿಂದು : ನವಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಕಾಶ್ಮೀರ ವಿವಾದ ಯಾವುದೇ ಸಂದರ್ಭದಲ್ಲಾದರೂ ಭಾರತ ಮತ್ತು ಪಾಕಿಸ್ತಾನದ ಮಧ್ಯೆ  ನಾಲ್ಕನೇ ಯುದ್ಧಕ್ಕೆ ಕಾರಣವಾಗಬಹುದು ಎಂದು ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ‘ಆಜಾದ್ ಜಮ್ಮು ಮತ್ತು ಕಾಶ್ಮೀರ ಕೌನ್ಸಿಲ್‌ (ಎಜೆಕೆ)’ ಬಜೆಟ್ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು ‘ಜನರ ಆಕಾಂಕ್ಷೆಗಳಿಗೆ ಅನುಗುಣವಾಗಿ ಕಾಶ್ಮೀರ ವಿವಾದ ಇತ್ಯರ್ಥವಾಗಬೇಕು. ಹೀಗಾಗದಿದ್ದರೆ ವಿಶ್ವಸಂಸ್ಥೆಯ ನಿರ್ಣಯದಂತೆ ಸ್ಥಳದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ. ಹೀಗಾಗಿ ಶೀಘ್ರವೇ ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳವುದು ಒಳ್ಳೆಯದು‘ ಎಂದಿದ್ದಾರೆ.

ಭಾರತದಿಂದ ಕಾಶ್ಮೀರ ಸ್ವತಂತ್ರವಾಗಬೇಕು ಎಂಬುದು ನನ್ನ ಕನಸು. ನನ್ನ ಜೀವಿತಾವಧಿಯಲ್ಲೇ ಅದು ನನಸಾಗಬೇಕು ಎಂದು ಇಚ್ಛಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)