ಕಿಞ್ಞಣ್ಣ ರೈ ಜನ್ಮದಿನೋತ್ಸವ

ಬುಧವಾರ, ಜೂಲೈ 17, 2019
26 °C

ಕಿಞ್ಞಣ್ಣ ರೈ ಜನ್ಮದಿನೋತ್ಸವ

Published:
Updated:

ಬೆಂಗಳೂರು ಪಯಸ್ವಿನಿ ಗೆಳೆಯರ ಬಳಗವು ಕವಿ ಡಾ.ಕಯ್ಯಾರ ಕಿಞ್ಞಣ್ಣ ರೈ ಅವರ 97ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಇದೇ 11 ರಂದು ಆಚರಿಸಲಿದೆ.ನಯನ ರಂಗ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸಾಹಿತಿ ಡಾ.ಡಿ.ಕೆ.ಚೌಟ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು, ವಿಮರ್ಶಕ ಎಸ್.ಆರ್.ವಿಜಯಶಂಕರ, ಶಿಕ್ಷಣ ತಜ್ಞರಾದ ಪ್ರೊ.ಕೆ.ಇ.ರಾಧಾಕೃಷ್ಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಅರ್ಜಿ ಆಹ್ವಾನ

ಭಾವಸಾರ್ ಕ್ಷತ್ರಿಯ ಶೈಕ್ಷಣಿಕ ಪ್ರೋತ್ಸಾಹ ಸಮಿತಿಯು ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿಯಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕಗಳಿಸಿದ ಭಾವಸಾರ್ ಕ್ಷತ್ರಿಯ ಜನಾಂಗದ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರೋತ್ಸಾಹಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿಗಳನ್ನು ಸುಮನ್ ಟೇಲರ್ಸ್‌, ಸಂಪಿಗೆ ರಸ್ತೆ, ಕುಳ್ಳಪ್ಪ ವೃತ್ತ, ಎಂ.ಎಸ್.ನಗರ ಈ ವಿಳಾಸಕ್ಕೆ ಕಳುಹಿಸಬಹುದು. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. 99860 83737.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry