ಶನಿವಾರ, ಏಪ್ರಿಲ್ 17, 2021
33 °C

ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳೂರಿನಲ್ಲಿ ಹೆಣ್ಣು ಮಕ್ಕಳ ಮೇಲೆ ಅಮಾನುಷ ಕೃತ್ಯವೆಸಗಿದ ಕಿಡಿಗೇಡಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಒತ್ತಾಯಿಸಿ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಆನಂದ್‌ರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.`ಬಿಜೆಪಿ ಪಕ್ಷಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಕೆಲವು ಸಂಘಟನೆಗಳ ಹಿಂದೆ ನಿಂತು ಸರ್ಕಾರವೇ ಇಂತಹ ಕೃತ್ಯಗಳನ್ನು ಮಾಡಿಸುತ್ತಿದೆ.ಹುಟ್ಟು ಹಬ್ಬದ ಆಚರಣೆಯಲ್ಲಿದ್ದ ಯುವತಿಯರನ್ನು ಮನಬಂದಂತೆ ಥಳಿಸಿ, ಅವರ ಬಟ್ಟೆಗಳನ್ನು ಹರಿದು ಹಾಕುವ ಮೂಲಕ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಎಲ್ಲಾ ಆರೋಪಿಗಳನ್ನು ಅತ್ಯಾಚಾರ ಯತ್ನ ಮತ್ತು ಗೂಂಡಾ ಕಾಯ್ದೆಯಡಿ ಬಂಧಿಸಬೇಕು~ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.