ಕಿರುಕುಳ ವಿರೋಧಿಸಿ ನೇಕಾರರ ಪ್ರತಿಭಟನೆ

ಭಾನುವಾರ, ಜೂಲೈ 21, 2019
21 °C

ಕಿರುಕುಳ ವಿರೋಧಿಸಿ ನೇಕಾರರ ಪ್ರತಿಭಟನೆ

Published:
Updated:

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ನೇಕಾರರಿಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ದಿ ಮೈಸೂರು ಪವರ್‌ಲೂಮ್ ಸಿಲ್ಕ್ ಮ್ಯಾನುಫ್ಯಾಕ್ಚರರ್ಸ್‌ ಕೊ - ಆಪರೇಟಿವ್ ಸೊಸೈಟಿಯ ಸದಸ್ಯರು ನಗರದ ಪುರಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯಲ್ಲಿ ಮಾತನಾಡಿದ ಸೊಸೈಟಿಯ ಅಧ್ಯಕ್ಷ ಎಂ.ಎಲ್.ಜಯರಾಮ್, `ವಿದ್ಯುತ್ ಮಗ್ಗಗಳಿಂದ ಬರುವ ಶಬ್ದ 80 ಡೆಸಿಬಲ್‌ಗಳಿಗಿಂತ ಹೆಚ್ಚಾಗಿರುತ್ತದೆ. ಮಗ್ಗಗಳಿಂದ ಶಬ್ದ ಹೊರಬರದಂತೆ ಶಬ್ದ ನಿಯಂತ್ರಕ ವ್ಯವಸ್ಥೆಯನ್ನು (ಸೌಂಡ್ ಪ್ರೂಫ್) ಅಳವಡಿಸಿಕೊಳ್ಳಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಒತ್ತಡ ತರುತ್ತಿದ್ದಾರೆ' ಎಂದು ಆರೋಪಿಸಿದರು.`ಇತ್ತೀಚೆಗೆ ಅಧಿಕಾರಿಗಳು ಮಗ್ಗಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಇದರಿಂದ ಅನೇಕ ನೇಕಾರರಿಗೆ ತೊಂದರೆಯಾಗುತ್ತಿದೆ. ನೇಕಾರರಿಗೆ ತೊಂದರೆ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಅವರು ಒತ್ತಾಯಿಸಿದರು.`ದಿನದಿಂದ ದಿನಕ್ಕೆ ರೇಷ್ಮೆ ಬೆಲೆ ಹೆಚ್ಚಾಗುತ್ತಿದೆ. ಈ ಮಧ್ಯೆ ಅಧಿಕಾರಿಗಳ ಕಿರುಕುಳವೂ ಸೇರಿ ಮಗ್ಗಗಳನ್ನು ನಡೆಸುವುದು ಕಷ್ಟವಾಗುತ್ತಿದೆ. ಈ ವಿಚಾರದಲ್ಲಿ ಜವಳಿ ಸಚಿವರು ಮಧ್ಯ ಪ್ರವೇಶಿಸಿ ನೇಕಾರರ ಸಮಸ್ಯೆಗಳನ್ನು ಪರಿಹರಿಸಬೇಕು' ಎಂದು ಅವರು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry