ಶನಿವಾರ, ಮೇ 21, 2022
20 °C

ಕುಂದಗೋಳ: ಮನೆ ನೀಡಲು ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಗೋಳ : ಪಟ್ಟಣದಲ್ಲಿ ಅಲೆಮಾರಿ ಜನಾಂಗ ಮತ್ತು ಬಡ ಜನಾಂಗದವರಿಗೆ ವಸತಿ ಮತ್ತು ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಗಾಳಿ ಮಾರಮ್ಮ ದೇವಸ್ಥಾನದಿಂದ ಬುಧವಾರ ಮೆರವಣಿಗೆ ನಡೆಯಿತು.ಅಲೆಮಾರಿ ಜನಾಂಗದವರು ಪಟ್ಟಣದಲ್ಲಿ ಕಳೆದ 20 ವರ್ಷಗಳಿಂದ ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ. ವಸತಿ, ರೇಷನ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ ಇನ್ನಿತರ ಸೌಲಭ್ಯ ನೀಡಬೇಕು.

ಬಿಜೆಪಿ ಸರ್ಕಾರ ಬಂದು ನಾಲ್ಕು ವರ್ಷಗಳು ಕಳೆದರೂ ಇಲ್ಲಿಯವರೆಗೆ ಬಡಜನರಿಗೆ ಒಂದು ಮನೆ ಕಟ್ಟಿಸಿಕೊಟ್ಟಿಲ್ಲ. ಬಡವರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಎಂದು ಮಾಜಿ ಶಾಸಕ ಸಿ.ಎಸ್. ಶಿವಳ್ಳಿ ದೂರಿದರು.ಮುಖ್ಯಾಧಿಕಾರಿ ಮನವಿ ಸ್ವೀಕರಿಸಿ ಸಮಸ್ಯೆಗೆ ಸ್ಪಂದಿಸುತ್ತೇವೆ ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಅರವಿಂದ ಕಟಗಿ, ಅಜ್ಜಪ್ಪ ಕುಡವಕ್ಕಲ, ಬಸವರಾಜ ಸಿರಸಂಗಿ, ಅಜೀಜ ಕ್ಯಾಲಕೊಂಡ, ಬಸವರಾಜ ವಟವಟಿ, ಮಹೇಶ ಕಾಲವಾಡ, ಹೈದರಸಾಬ್ ಹಸುಬಾಯಿ, ಮನೋಜ ವಡ್ಡರ, ಕೃಷ್ಣಾ ಕುಡಕರ, ಚೌಡವ್ವ ಬನ್ನಿಕೊಪ್ಪ ಮತ್ತಿತರರು ಹಾಜರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.