ಭಾನುವಾರ, ಮೇ 9, 2021
26 °C

ಕುಂದುಕೊರತೆ: ಶಾಸಕರಿಂದ ವಾರ್ಡ್‌ಗಳಿಗೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ಪುರಸಭೆ ವ್ಯಾಪ್ತಿಯ 23ವಾರ್ಡುಗಳ ನಾಗರಿಕರ ಕುಂದು ಕೊರತೆ ತಿಳಿಯಲು ಪ್ರತಿ ವಾರ್ಡ್‌ಗಳಿಗೆ ಭೇಟಿ ನೀಡಲಾಗುವುದು ಎಂದು ಶಾಸಕ ಕೆ.ವೆಂಕಟಸ್ವಾಮಿ ತಿಳಿಸಿದರು.ಪಟ್ಟಣದ 6ನೇ ವಾರ್ಡಿನ ಗಾಣಿಗರ ಬೀದಿಯಲ್ಲಿ ಗುರುವಾರ ನಾಗರಿಕರ ಕುಂದು ಕೊರತೆ ಆಲಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ಗ್ರಾಮೀಣ ಪ್ರದೇಶಕ್ಕಿಂತ ಪಟ್ಟಣದಲ್ಲಿ ಹೆಚ್ಚಾಗಿದೆ. ಇಲ್ಲಿ ಪ್ರತಿ 10 ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಕೊಳಚೆ ಪ್ರದೇಶದಲ್ಲಿ ಸೂಕ್ತ ಚರಂಡಿ ನಿರ್ವಹಣೆ ಆಗಬೇಕಾಗಿದೆ. ಅನೇಕ ಬೀದಿಗಳಲ್ಲಿರುವ ಹಳೆಯ ವಿದ್ಯುತ್ ಕಂಬಗಳನ್ನು  ತೆರೆವುಗೊಳಿಸಿ ಹೊಸ ಕಂಬ ಅಳವಡಿಸಬೇಕಿದೆ ಎಂದರು.ಕುಡಿಯುವ ನೀರಿನ ತುರ್ತು ನಿರ್ವಹಣೆಗೆ ಪುರಸಭೆಯ ಸಿ.ಆರ್.ಎಫ್ ಯೋಜನೆಯಲ್ಲಿ 5ಕೋಟಿ ರೂಪಾಯಿ ಅನುದಾನವಿದ್ದು, ಅಗತ್ಯವಿರುವ ಪ್ರತಿ ವಾರ್ಡಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದರು.   6 ದಿನಗಳ ಕಾಲ ಎಲ್ಲ ವಾರ್ಡುಗಳಿಗೆ ತೆರಳಿ ಅಲ್ಲಿರುವ ಸಮಸ್ಯೆಗಳನ್ನು ತಿಳಿದು ನಿವಾರಣೆ ಮಾಡಬೇಕು. ಅಲ್ಲದೆ ಹೆಚ್ಚುವರಿಯಾಗಿ ಶಾಸಕರ ಅನುದಾನದಲ್ಲಿ 4ಕೊಳವೆ ಬಾವಿ ಕೊರೆಸಲು ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ಪುರಸಭೆ ಸದಸ್ಯ ಹಂಸರಾಜಣ್ಣ, ಜಿ.ಎನ್.ವೇಣುಗೋಪಾಲ್,  ವಿಎಸ್‌ಎಸ್‌ಎನ್ ಬ್ಯಾಂಕ್ ಅಧ್ಯಕ್ಷ ಎನ್.ರಘು,  ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್.ಸಿ.ಚಂದ್ರಪ್ಪ, ಶಂಕರ್, ಸೊಸೈಟಿ ನಂಜಪ್ಪ ಇತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.