ಕುಂಬಾರಹಳ್ಳದಲ್ಲಿ ಸೈಕ್ಲಿಂಗ್ ಸ್ಪರ್ಧೆ

7

ಕುಂಬಾರಹಳ್ಳದಲ್ಲಿ ಸೈಕ್ಲಿಂಗ್ ಸ್ಪರ್ಧೆ

Published:
Updated:

ಹುಬ್ಬಳ್ಳಿ: `ಕರ್ನಾಟಕದ ಸೈಕ್ಲಿಂಗ್ ಕಾಶಿ~ ಎಂದೇ ಹೆಸರಾಗಿರುವ ಬಾಗಲಕೋಟೆ ಜಿಲ್ಲೆಯ ಕುಂಬಾರಹಳ್ಳ ಗ್ರಾಮದಲ್ಲಿ ಫೆ. 18 ಮತ್ತು 19ರಂದು ಏಳನೇ ರಾಜ್ಯಮಟ್ಟದ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‌ಷಿಪ್ ಆಯೋಜಿಸಲಾಗಿದೆ.ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಸಂಸ್ಥೆ ಮತ್ತು ಕುಂಬಾರಹಳ್ಳ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಈ ಸ್ಪರ್ಧೆಯನ್ನು ಸಂಘಟಿಸಲಾಗಿದೆ. 13, 15, 17 ಮತ್ತು 19 ವಯೋಮಾನದ ಬಾಲಕ-ಬಾಲಕಿಯರು, ಮಹಿಳೆ ಹಾಗೂ ಪುರುಷ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಎರಡು ಬ್ರೇಕ್ ಹೊಂದಿರುವ ಎಂಟಿಬಿ ಸೈಕಲ್ ಮತ್ತು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.ಹೆಚ್ಚಿನ ಮಾಹಿತಿಗೆ ರಾಜ್ಯ ಸೈಕ್ಲಿಂಗ್ ಸಂಸ್ಥೆಯ ಕಾರ್ಯದರ್ಶಿ ಶ್ರೀಶೈಲ ಕುರಣಿ (9008377875) ಅವರನ್ನು ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry