ಮಂಗಳವಾರ, ಮೇ 11, 2021
22 °C

ಕುಟುಂಬ ನ್ಯಾಯಾಲಯ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪಿತವಾಗಿರುವ ಕುಟುಂಬ ನ್ಯಾಯಾಲಯದ  ಕಚೇರಿಯನ್ನು ನಗರದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಅವರ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ನ್ಯಾಯಾಧೀಶ ಎಂ.ಎಲ್. ರಘುನಾಥ ಬುಧವಾರ ಉದ್ಘಾಟಿಸಿದರು.ಅನೇಕ ಕಾರಣಗಳಿಂದ ಯಾವುದೇ ಕುಟುಂಬದಲ್ಲಿ ಎದುರಾಗುವ ಸಮಸ್ಯೆಗಳನ್ನು ಈ ನ್ಯಾಯಾಲಯದಲ್ಲಿ ಬಗೆಹರಿಸಲಾಗುವುದು. ಈ ನ್ಯಾಯಾಲಯ ಪೂರ್ಣ ಪ್ರಮಾಣದ, ಸ್ವತಂತ್ರ ವ್ಯವಸ್ಥೆ ಹೊಂದಿದ್ದು, ಇತರ ಪ್ರಕರಣಗಳನ್ನೂ ಪರಿಹರಿಸಲಾಗುವುದು ಎಂದು ಅವರು ತಿಳಿಸಿದರು.ಸಾಮಾನ್ಯ ಕೌಟುಂಬಿಕ ಸಮಸ್ಯೆಗಳು ಮತ್ತು ಕೌಟುಂಬಿಕ ದೌರ್ಜನ್ಯ, ಶೋಷಣೆ ಮತ್ತಿತರ ಪ್ರಕರಣಗಳನ್ನು ದಾಖಲಿಸಿ, ಸೂಕ್ತ ನೆರವು ಪಡೆಯಬಹುದಾಗಿದೆ. ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಂ.ಎಸ್.ಪಾಟೀಲ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಚ್. ಶಾಂತಾ, ಪ್ರಧಾನ ಸಿವಿಲ್ ನ್ಯಾಯಾಧೀಶ ರಮೇಶ್, 1ನೇ ಹಿರಿಯ ಸಿವಿಲ್ ನ್ಯಾಯಾಧೀಶರಾದ ಲತಾ, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಂ.ಬಿ. ಕುಲಕರ್ಣಿ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಝರೀನಾ, 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೆ.ಯಮನಪ್ಪ, ವಕೀಲರ ಸಂಘದ ಅಧ್ಯಕ್ಷ ಎ.ಜಿ. ಶಿವಕುಮಾರ, ಉಪಾಧ್ಯಕ್ಷ ಕೆ. ಯರ‌್ರಿಗೌಡ, ಕಾರ್ಯದರ್ಶಿ ಡಿ.ಎಸ್. ಬದರಿನಾಥ, ಪ್ರಧಾನ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಡಿ. ಪರಶಿವಶೆಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.