ಕುಡಿತ ಪ್ರಶ್ನಿಸಿದ ಪತ್ನಿ ಕೊಲೆ

7

ಕುಡಿತ ಪ್ರಶ್ನಿಸಿದ ಪತ್ನಿ ಕೊಲೆ

Published:
Updated:

ಬೆಂಗಳೂರು: ಪಾನಮತ್ತನಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುಪಿತಗೊಂಡ ವ್ಯಕ್ತಿಯೊಬ್ಬ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಘಟನೆ ಪರಪ್ಪನ “ಅಗ್ರಹಾರ ಸಮೀಪದ ಗೋವಿಂದಚೆಟ್ಟಿಪಾಳ್ಯದಲ್ಲಿ ಶನಿವಾರ ರಾತ್ರಿ ನಡೆದಿದೆ.ಆಂಧ್ರಪ್ರದೇಶ ಮೂಲದ ರತ್ನಮ್ಮ (38) ಕೊಲೆಯಾದವರು. ಆರೋಪಿ ಪತಿ ಶ್ರೀನಿವಾಸ್ ತಲೆಮರೆಸಿಕೊಂಡಿದ್ದಾನೆ. 15 ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿಗೆ ಲೋಕೇಶ್ ಮತ್ತು ರೋಜಾ ಎಂಬ ಇಬ್ಬರು ಮಕ್ಕಳಿದ್ದಾರೆ.ಕೂಲಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್, ರಾತ್ರಿ ಪಾನಮತ್ತರಾಗಿ ಮನೆಗೆ ಬಂದಿದ್ದಾರೆ. ಇದರಿಂದ ಕೋಪಗೊಂಡ ರತ್ನಮ್ಮ ಪತಿಯೊಂದಿಗೆ ಜಗಳ ತೆಗೆದಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಆತ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.

ಈ ಸಂದರ್ಭದಲ್ಲಿ ಅಜ್ಜಿಯ ಮನೆಗೆ ಹೋಗಿದ್ದ ಮಕ್ಕಳು, 12 ಗಂಟೆಗೆ ವಾಪಸ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರುತಿಳಿಸಿದ್ದಾರೆ.ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry