ಶನಿವಾರ, ಮೇ 15, 2021
26 °C

ಕುಡಿಯುವ ನೀರಿಗಾಗಿ ಬಿಂದಿಗೆಗಳ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ನಗರದ ಅಗಸನಕಲ್ಲು ಪ್ರದೇಶದ ನಿವಾಸಿಗಳು ಬಿಂದಿಗೆಗಳನ್ನು ಪ್ರದರ್ಶಿಸಿ ಶನಿವಾರ ಪ್ರತಿಭಟಿಸಿದರು.18ನೇ ವಾರ್ಡ್‌ಗೆ ಸೇರಿರುವ ಈ ಬಡಾವಣೆಯಲ್ಲಿ ಮೂಲಸೌಕರ್ಯಗಳೇ ಇಲ್ಲ.ನಗರಸಭೆ ಅಧ್ಯಕ್ಷರು, ಅಧಿಕಾರಿಗಳು, ಸದಸ್ಯರು ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇಲ್ಲಿ ಭೇಟಿ ನೀಡಿ ಸಮಸ್ಯೆಗಳನ್ನು ಅರಿತುಕೊಳ್ಳುವ ಪ್ರಯತ್ನವನ್ನೇ ಯಾರೂ ಮಾಡುವುದಿಲ್ಲ ಎಂದು ನಿವಾಸಿಗಳು ದೂರಿದರು.

ಕುಡಿಯುವ ನೀರಿಲ್ಲದೆ ಇಲ್ಲಿನ ನಿವಾಸಿಗಳು ಪರದಾಡಬೇಕಾಗಿದೆ. ತಿಂಗಳಲ್ಲಿ ಎರಡು-ಮೂರು ಬಾರಿ ಮಾತ್ರ ಟ್ಯಾಂಕ್ ಕಳುಹಿಸುತ್ತಾರೆ. ಈ ನೀರು ಯಾವುದಕ್ಕೂ ಸಾಕಾಗುತ್ತಿಲ್ಲ.

 

ಟ್ಯಾಂಕ್ ನೀರು ಬದಲು ಸಮರ್ಪಕವಾಗಿ ಶಾಶ್ವತವಾಗಿ ನೀರಿನ ವ್ಯವಸ್ಥೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ನೀರಿನ ಸಮಸ್ಯೆಯಿಂದ ಮಹಿಳೆಯರು, ಮಕ್ಕಳಿಗೆ ತೀವ್ರ ತೊಂದರೆಯಾಗಿದ್ದು, ದೂರದ ಸ್ಥಳಗಳಿಂದ ಕುಡಿಯುವ ನೀರು ತರುವ ಪರಿಸ್ಥಿತಿ ಉಂಟಾಗಿದೆ. ನೀರಿಲ್ಲದೆ ನಾವು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.ಅಗಸನಕಲ್ಲು ಸುತ್ತಮುತ್ತ ಬಡಾವಣೆಗಳಲ್ಲಿ ಸ್ವಚ್ಛತೆಯನ್ನು ಸಹ ಕಾಪಾಡುತ್ತಿಲ್ಲ. ಚರಂಡಿಗಳನ್ನು ಇದುವರೆಗೆ ಒಂದು ಬಾರಿಯೂ ಸ್ವಚ್ಛಗೊಳಿಸಿಲ್ಲ. ಈ ಪ್ರದೇಶದಲ್ಲಿ ಸೊಳ್ಳೆಗಳು ಮತ್ತು ನಾಯಿಗಳ ಕಾಟ ಹೆಚ್ಚಾಗಿದೆ ಎಂದು ದೂರಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.