ಭಾನುವಾರ, ಜೂನ್ 20, 2021
23 °C

ಕುಡಿಯುವ ನೀರಿಗೆ ಆದ್ಯತೆ: ಚಂದ್ರೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಮಂಗಲ: ಜಿಲ್ಲಾಪಂಚಾಯಿತಿ ವ್ಯಾಪ್ತಿಗೆ ಬರುವ  ನನ್ನ ಅನುದಾನದಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಮಾಯಿಗೋನಹಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರೇಗೌಡ ಹೇಳಿದರು.ಈಚೆಗೆ ಭೈರನಹಳ್ಳಿ ಗ್ರಾಮದಲ್ಲಿ 15 ಲಕ್ಷ ರೂ ವೆಚ್ಚದ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ಮುಂಬರುವ ಬೇಸಿಗೆ ಕಾಲದಲ್ಲಿ ಗ್ರಾಮಗಳಲ್ಲಿ ಕುಡಿಯು ನೀರಿಗೆ ತೊಂದರೆ ಉಂಟಾಗಬಹುದು. ಈ ಕಾರಣಕ್ಕೆ ಮತ್ತು ಅನುದಾನ ಸದ್ಬಳಕೆಯಾಗಬೇಕೆಂಬ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಎಂ.ಹೊನ್ನೇನಹಳ್ಳಿ ಗ್ರಾಮಕ್ಕೆ 15 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಮೇಜರ್ ವಾಟರ್ ಟ್ಯಾಂಕ್, ರಾಮದೇವನಹಳ್ಳಿ, ಅಂಚೇಚಿಟ್ಟನಹಳ್ಳಿ, ಅಂಚೇಭೂವನಹಳ್ಳಿ, ಬೇಗಮಂಗಲ ಮುಂತಾದ ಗ್ರಾಮಗಳಲ್ಲಿ ಸಣ್ಣ ನೀರಾವರಿ ಸರಬರಾಜಿಗೆ ಅನುದಾನ ವಿನಿಯೋಗಿಸಲಾಗಿದೆ. ಅಲ್ಲದೆ ಬೆಟ್ಟದ ಮಲ್ಲೇನಹಳ್ಳಿ ವಿನಾಯಕ ಪ್ರೌಢಶಾಲೆಗೆ ಅಡುಗೆ ಮನೆಯ ಅವಶ್ಯಕತೆಯಿದ್ದು ಆ ಕಾಮಗಾರಿಯನ್ನು ಶೀಘ್ರದಲ್ಲೆ ಕೈಗೆತ್ತಿಕೊಳ್ಳಲಾಗುವುದಾಗಿ ತಿಳಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಟ್ಟನಂಜಮ್ಮ, ಜಿಲ್ಲಾ ಪಂಚಾಯಿತಿ ಅಭಿಯಂತರ ರಘುನಾಥ್, ಸಹಾಯಕ ಅಭಿಯಂತರ ವಿಶ್ವನಾಥ್, ಕಾಂಗ್ರೆಸ್‌ ಮುಖಂಡರಾದ ಲಕ್ಷ್ಮೀಶ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.