ಗುರುವಾರ , ಜೂನ್ 24, 2021
27 °C

ಕುಡಿಯುವ ನೀರಿಗೆ ಕರವೇ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ನಗರದಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ವಿತರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಸೋಮವಾರ ಪೌರಾಯುಕ್ತರಿಗೆ ಮನವಿಯನ್ನು ಸಲ್ಲಿಸಿದರು.ನಗರದ ಕೆಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾ ಗಿದ್ದು. ಜನರಿಗೆ ನಗರಸಭೆಯಿಂದಲೇ ಟ್ಯಾಂಕ್‌ರ್‌ಗಳ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.ನಗರದ ವಿವಿಧ ಬಡಾವಣೆಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸು ವುದು, ನಡೆಯುತ್ತಿರುವ ರಸ್ತೆ ಹಾಗೂ ಒಳಚರಂಡಿ ಕಾಮ ಗಾರಿಗಳ ಗುಣಮಟ್ಟ ಕಾಪಾಡಿ ಕೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.ಪೌರಾಯುಕ್ತ ಡಾ.ರಾಮೇಗೌಡ ಮನವಿ ಸ್ವೀಕರಿಸಿ ಮಾತನಾಡಿದ, ನಗರಕ್ಕೆ ಕುಡಿಯುವ ನೀರನ್ನು ಪೂರೈ ಸುತ್ತಿದ್ದ ಕನಂಪಲ್ಲಿ ಕೆರೆ ಸಂಪೂರ್ಣವಾಗಿ ಬರಿದಾಗಿದೆ. ಕೊಳವೆ ಬಾವಿಗಳನ್ನು ಬಿಟ್ಟರೆ ಬೇರೆ ಯಾವ ಮೂಲ ದಿಂದಲೂ ನೀರು ಸಿಗುತ್ತಿಲ್ಲ ಎಂದು ತಿಳಿಸಿದರು.ಕರವೇ ಮುಖಂಡರಾದ ಅಸ್ಲಾಂ ಪಾಷಾ, ಮುನಿ ನಾರಾಯಣಪ್ಪ, ನಾಗರಾಜ್, ಶಂಕರ್, ಇಲಿಯಾಜ್ ಮತ್ತಿತರರ ಮುಖಂಡರು ನೇತೃತ್ವ ವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.