ಶನಿವಾರ, ಡಿಸೆಂಬರ್ 7, 2019
24 °C

ಕುಡಿಯುವ ನೀರಿಗೆ ಮೊದಲ ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಡಿಯುವ ನೀರಿಗೆ ಮೊದಲ ಆದ್ಯತೆ

ಶ್ರೀನಿವಾಸಪುರ: ಗಡಿ ಭಾಗದ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡಲಾ ಗಿದೆ. ಯಾವುದೇ ಗ್ರಾಮದಲ್ಲೂ ಕುಡಿಯುವ ನೀರು ಸಮಸ್ಯೆ ಉಂಟಾಗ ದಂತೆ ಎಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಕೆ. ನಾಗರಾಜ್ ಹೇಳಿದರು.ತಾಲ್ಲೂಕಿನ ಗಡಿ ಗ್ರಾಮ ರಾಯಲ್ಪಾಡ್‌ಗೆ ಸೋಮವಾರ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ ಮಾತನಾಡಿದ ಅವರು, ಗ್ರಾಮದ ವಿದ್ಯಾರ್ಥಿ ನಿಲಯದ ಬಳಕೆಗೆ ಜಿಲ್ಲಾ ಪಂಚಾಯಿತಿ ಸದಸ್ಯರ ಅನುದಾನದಲ್ಲಿ ಕೊಳವೆ ಬಾವಿ ನಿರ್ಮಿಸಲಾಗಿದ್ದು ಒಳ್ಳೆ ನೀರು ಸಿಕ್ಕಿದೆ. ಇದರಿಂದ ವಿದ್ಯಾರ್ಥಿ ನಿಲಯದ ನೀರಿನ ಸಮಸ್ಯೆ ನಿವಾರಣೆಯಾಗಿದೆ. ಆದಷ್ಟು ಬೇಗ ನೀರೆತ್ತಲು ಅಗತ್ಯವಾದ ಪಂಪ್‌ಸೆಟ್ ಅಳವಡಿಸಲಾಗುವುದು ಎಂದರು.ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಾಲ್ಲೂಕಿನ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶ ಹಾಗೂ ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರ ದಂತೆ ಕ್ರಮ ಕೈಗೊಂಡಿದ್ದಾರೆ. ದಿನೇ ದಿನೇ ಕುಸಿಯುತ್ತಿರುವ ಅಂತರ್ಜಲ ಹಾಗೂ ವಿದ್ಯುತ್ ಸಮಸ್ಯೆ ಕುಡಿಯುವ ನೀರು ಪೂರೈಕೆ ಮೇಲೆ ದುಷ್ಪರಿಣಾಮ ಬೀರಿದೆ. ಆದರೂ ಅಗತ್ಯ ಇರುವೆಡೆ ಸಾಕಷ್ಟು ಸಂಖ್ಯೆಯಲ್ಲಿ ಕೊಳವೆ ಬಾವಿ ಕೊರೆಯಲಾಗುತ್ತಿದೆ ಎಂದರು.ಮುಂಖಡರಾದ ಎಂ.ಜಿ.ಶ್ರೀನಿವಾಸ ರೆಡ್ಡಿ, ಲಕ್ಷ್ಮೀನಾರಾಯಣ, ಕಿಟ್ಟ, ಶ್ರೀನಿವಾಸ್, ವೆಂಕಟ್ರಾಯಪ್ಪ, ವಿದ್ಯಾರ್ಥಿ ನಿಲಯದ ಮೇಲ್ವಿಚಾರಾಕ ತಿಪ್ಪಾರೆಡ್ಡಿ, ಸಿಬ್ಬಂದಿ ಬಾಬು,ರಮಣಪ್ಪ ಉಪಸ್ಥಿತರಿದ್ದರು.ಉತ್ತಮ ಸಮಾಜ ನಿರ್ಮಾಣಕ್ಕೆ ಸಲಹೆ

ಮಾಲೂರು:
ಸಮಾಜದಲ್ಲಿನ ಭ್ರಷ್ಟಾಚಾರ ತಡೆಯಲು ಹಾಗೂ ಪ್ರಜಾ ಪ್ರಭುತ್ವದ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಯುವ ಜನತೆ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಹಶೀಲ್ದಾರ್ ಎಚ್.ಅಮರೇಶ್ ತಿಳಿಸಿದರು.ಪಟ್ಟಣದ ಕೃಷಿಕ ಸಮಾಜ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯ ಕ್ರಮದಲ್ಲಿ ಮಾತನಾಡಿ, ತಾಲ್ಲೂಕಿನಲ್ಲಿ 1.19 ಲಕ್ಷ ಮತದಾರರಿದ್ದು, ಶೇ. 92 ಎಪಿಕ್ ಕಾರ್ಡ್‌ಗಳನ್ನು ವಿತರಿಸುವ ಮೂಲಕ ಜಿಲ್ಲೆಯಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಜನೀಕಾಂತ್ ಮಲ್ಲಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಗಸ್ವಾಮಿ, ಸಿಡಿಪಿಒ ರವೀಂದ್ರ, ಬಿಆರ್‌ಸಿ    ಕೆಂಪಣ್ಣ, ಚುನಾವಣಾಧಿಕಾರಿಗಳಾದ ರಾಮಕೃಷ್ಣಪ್ಪ, ಮುನೇಶ್ವರಚಾರಿ, ಕಂದಾಯ ಅಧಿಕಾರಿ ಜಯರಾಂ, ಗ್ರಾಮಲೆಕ್ಕಿಗ ನಾರಾಯಣಸ್ವಾಮಿ, ಜಿ.ಪಂ. ಮಾಜಿ ಸದಸ್ಯ ಹನುಮಂತಪ್ಪ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)