ಭಾನುವಾರ, ಏಪ್ರಿಲ್ 11, 2021
20 °C

ಕುಡಿಯುವ ನೀರಿಗೆ 1 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಂಡಿ: ಇಂಡಿ ಪಟ್ಟಣದ ನಾಗರಿಕರಿಗೆ ಕುಡಿಯುವ ನೀರಿಗಾಗಿ ಶಾಸಕ ಡಾ. ಸಾರ್ವಭೌಮ ಬಗಲಿ ಅವರು ರಾಜ್ಯ ಸರಕಾರದಿಂದ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಿಸಿದ್ದಾರೆ ಎಂದು ಪುರಸಭೆಯ ಅಧ್ಯಕ್ಷ ದೇವೇಂದ್ರ ಕುಂಬಾರ ಹೇಳಿದರು.ಅವರು ಪಟ್ಟಣದಲ್ಲಿ ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಮೋಟಾರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಹಣದಲ್ಲಿ ಕುಡಿಯುವ ನೀರಿನ ತೊಂದರೆಯಿರುವ ಪಟ್ಟಣದ ವಿವಿಧ ಬಡಾವಣೆಗಳಲ್ಲಿ 50 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಅವುಗಳಲ್ಲಿ ಸುಮಾರು 43 ಕೊಳವೆ ಬಾವಿಗಳಿಗೆ ನೀರು ಬಂದಿದ್ದು, ಅವೆಲ್ಲವುಗಳಿಗೆ ವಿದ್ಯುತ್ ಮೋಟಾರ ಅಳವಡಿಸುವ ಕಾರ್ಯ ಕೈಕೊಳ್ಳಲಾಗಿದೆ ಎಂದರು.ಇದರಿಂದ ಪಟ್ಟಣದಲ್ಲಿಯ ನಾಗರಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯಾಗಲಿದೆ ಎಂದು ಹೇಳಿದ ಅವರು ಪಟ್ಟಣದಲ್ಲಿ ಒಳಚರಂಡಿ ಯೋಜನೆ ಕಾರ್ಯ ಪ್ರಗತಿಯಲ್ಲಿದೆ. ಇದು ಮುಗಿದ ನಂತರ ವಿಜಾಪೂರ ರಸ್ತೆ, ಸ್ಟೇಶನ್ ರಸ್ತೆ, ಅಗರಖೇಡ ರಸ್ತೆಗಳನ್ನು ಕಾಂಕ್ರೆಟ್ ರಸ್ತೆಗಳನ್ನಾಗಿ ಮಾಡಲಾಗುವದು ಎಂದು ಅವರು ಹೇಳಿದರು.ಪಟ್ಟಣದ ಸೌಂದರ್ಯೀಕರಣಕ್ಕಾಗಿ 20 ಕೋಟಿ, ರೂಪಾಯಿ ಅನುದಾನ ಬಿಡುಗಡೆ ಮಾಡಬೇಕೆಂದು ಬಿಜೆಪಿಯ ಯುವ ಮುಖಂಡ ಸಂಕೇತ ಬಗಲಿ ಅವರ ನೇತೃತ್ವದಲ್ಲಿ ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಅವರು ಪಟ್ಟಣದ ಅಭಿವೃದ್ಧಿಗೆ ಮೊದಲನೆ ಕಂತಾಗಿ 10 ಕೋಟಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.ಹಣ ಬಿಡುಗಡೆಯಾದ ತಕ್ಷಣವೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವದು ಎಂದ ಅವರು ಪಟ್ಟಣದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಪಕ್ಷಾತೀತವಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.ಪುರಸಭೆಯ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ಕೈಕೊಳ್ಳಲಾಗುವುದು. ಪಟ್ಟಣದ ಕೆಲವು ಬಡಾವಣೆಗಳಲ್ಲಿ ಉತ್ತಮ ರಸ್ತೆ ನಿರ್ಮಿಸುವ ಕುರಿತು ಚಿಂತನೆ ನಡೆದಿದೆ. ಅನುದಾನ ಬಿಡುಗಡೆಯಾದ ತಕ್ಷಣವೇ ಕ್ರಮ ಕೈಕೊಳ್ಳಲಾಗುವುದು ಎಂದು ಅವರು ವಿವರಿಸಿದರು.ಮುಖ್ಯಾಧಿಕಾರಿ ಎಂ.ಎಂ.ತೋಳನೂರ, ಬುದ್ದುಗೌಡ ಪಾಟೀಲ, ಶಾಂತು ಶಿರಕನಹಳ್ಳಿ, ಮಹಾದೇವಪ್ಪ ತೆನ್ನಳ್ಳಿ, ಬಾಬು ಬಿರಾದಾರ, ಮಲ್ಲು ದೇವರ, ಬಾಬು ವಾಲೀಕಾರ, ಶ್ರೆಮಂತ ಹದಗಲ್ಲ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.