ಶನಿವಾರ, ಮೇ 21, 2022
25 °C

ಕುಡಿಯುವ ನೀರಿಗೆ 20 ಲಕ್ಷ: ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಮುಂಗಾರು ಮಳೆ ಸಕಾಲದಲ್ಲಿ ಬೀಳದ ಕಾರಣ ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ತಪ್ಪಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ರೂ. 20 ಲಕ್ಷ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ನಡೆದ ಬರ ಪರಿಹಾರ ಕಾಮಗಾರಿ ಮತ್ತು ಕುಡಿಯುವ ನೀರಿನ ಪೂರೈಕೆ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಈಗಾಗಲೇ ರೂ.18 ಕೋಟಿ ಖರ್ಚು ಮಾಡಲಾಗಿದ್ದು, 583 ಕೊಳವೆ ಬಾವಿ ಕೊರೆಸಲಾಗಿದೆ ಎಂದರು.ಈ ಕಾಮಗಾರಿಗಳಿಗೆ ಬಾಕಿ ಇರುವಂತಹ ವಿದ್ಯುದ್ದೀಕರಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ, ಜನತೆಗೆ ನೀರು ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಪಡೆ: ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದ್ದು, ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು. ಸಮಸ್ಯೆ ಪರಿಹಾರ ಕಾಣದಿದ್ದರೆ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.ಪ್ರತಿ ತಾಲ್ಲೂಕಿನಲ್ಲಿ 5 ಟ್ರಾನ್ಸ್‌ಫಾರ್ಮರ್‌ಗಳನ್ನು ಕಾಯ್ದಿರಿಸಬೇಕು. ಕುಡಿಯುವ ನೀರಿನ ಸಂಪರ್ಕ ಇರುವ  ಟ್ರಾನ್ಸ್‌ಫಾರ್ಮರ್‌ಗ ಹಾಳಾದಾಗ ಇವುಗಳನ್ನು ಬಳಸಿಕೊಳ್ಳಬೇಕು ಎಂದು ಸೂಚಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.