ಸೋಮವಾರ, ಮೇ 10, 2021
28 °C

ಕುಡಿಯುವ ನೀರಿನ ಸಮಸ್ಯೆ: 24 ಗಂಟೆಯೊಳಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ 24 ಗಂಟೆಯೋಗೆ ಪರಿಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕಾಧಿಕಾರಿ ರಾಧಾಕೃಷ್ಣರೆಡ್ಡಿ ತಿಳಿಸಿದರು.ತಾ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ವೇಳೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಎದುರಾಗದಂತೆ ತಾಲ್ಲೂಕು ಪಂಚಾಯಿತಿ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿಗಳು  ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕುಡಿಯುವ ನೀರು ಮತ್ತು ಬರ ಪರಿಸ್ಥಿತಿ ಕುರಿತು ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದರು.ಗ್ರಾಮ ಪಂಚಾಯಿತಿಗಳಲ್ಲಿ ಪಂಪ್ ಆಪರೇಟರ್‌ಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವ ಕುರಿತು ಸಂಬಂಧಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪರಿಶೀಲಿಸಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲೇ ವಾಸವಿರಬೇಕು ಎಂದು ಹೇಳಿದರು.ಕುಡಿಯುವ ನೀರಿನ ಸಮಸ್ಯೆಗಾಗಿ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ದೂರವಾಣಿ ಸಂಖ್ಯೆ (08392) 266645 ಅಥವಾ ಮೊಬೈಲ್ ಸಂಖ್ಯೆ 98808- 33455 ಸಂಪರ್ಕಿಸಿ ದೂರು ದಾಖಲಿಸಬಹುದು ಎಂದು ತಿಳಿಸಿದರು.ಸಹಕಾರ ಇಲಾಖೆಯ ರಾಜ್ಯ ಯೋಜನೆ ಅಡಿ ಹಿಂದುಳಿದ/ ಅಲ್ಪಸಂಖ್ಯಾತ ಹಾಗೂ ಅಲೆಮಾರಿ ಜನಾಂಗದವರಿಗೆ ವಿವಿಧ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಪಡೆಯಲು ರೂ 0.75 ಲಕ್ಷ ಸಹಾಯಧನ ನೀಡಿ, 300 ಜನರಿನ್ನು ಸದಸ್ಯರನ್ನಾಗಿ ನೋಂದಾಯಿಸಿಕೊಳ್ಳಲಾಗಿದೆ.

 

ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್, ಸಾಂಪ್ರಾದಾಯಿಕ ಕುಶಲಕರ್ಮಿಗಳ ಸಾಲದ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲಾಗಿದ್ದು, ಗಂಗಾ ಕಲ್ಯಾಣ ಹಾಗೂ ನ್ಯೂ ಸ್ವರ್ಣಿಮಾ ಯೋಜನೆ ಅಡಿ ಫಲಾನುಭವಿಗಳ ಆಯ್ಕೆ ಪೂರ್ಣಗೊಂಡಿದ್ದು, ಜಲಬಿಂದು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.2011-12ನೇ ಸಾಲಿನಲ್ಲಿ ವಿದ್ಯಾ ವಿಕಾಸ ಯೋಜನೆ ಅಡಿ 128 ಪ್ರಾಥಮಿಕ ಹಾಗೂ 16 ಪ್ರೌಢ ಘಟಕಗಳಿಗೆ ಸಮವಸ್ತ್ರ ವಿತರಿಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ಒಂದು ಮತ್ತು ಎರಡನೇ ತರಗತಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, 4ರಿಂದ 10ನೇ ತರಗತಿ ಮಕ್ಕಳಿಗೆ ನೋಟ್‌ಪುಸ್ತಕ ವಿತರಿಸಲಾಗಿದೆ. ಅತಿ ಹೆಚ್ಚು ಅಂಕಗಳಿಸಿದ ಪ.ಜಾ/ಪ.ಪಂಗಡದ ಮಕ್ಕಳಿಗೆ 87500 ರೂ.ಗಳ ಪ್ರೋತ್ಸಾಹಧನ ನೀಡಲಾಗಿದೆ ಎಂದು ತಿಳಿಸಿದರು.ತಾ.ಪಂ. ಅಧ್ಯಕ್ಷೆ ಉಮಾದೇವಿ, ಉಪಾಧ್ಯಕ್ಷ ಹನುಮಂತಪ್ಪ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.