ಮಂಗಳವಾರ, ಏಪ್ರಿಲ್ 20, 2021
31 °C

ಕುಡಿಯುವ ನೀರಿನ ಹೊಸ ಯೋಜನೆ: ಕತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕೋಡಿ: ಬೆಳೆಯುತ್ತಿರುವ ಜನಸಂಖ್ಯೆಯನ್ನು ಗಮನದಲ್ಲಿ ಇಟ್ಟುಕೊಂಡು ಕುಡಿಯುವ ನೀರಿನ ಸರಬರಾಜು ಯೋಜನೆಗಳನ್ನು ಹೊಸದಾಗಿ ರೂಪಿಸಲು ಪ್ರಯತ್ನಿಸಲಾಗುವುದು ಎಂದು ಸಂಸದ ರಮೇಶ ಕತ್ತಿ ಹೇಳಿದರು.ತಾಲ್ಲೂಕಿನ ಕಬ್ಬೂರ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕ ಮತ್ತು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 10 ಸಂಪರ್ಕ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಮೂಡಲಗಿ ಬಳಿಯ ಎತ್ತರದ ಪ್ರದೇಶದಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಿಸಿ ವಿದ್ಯುತ್ ಇಲ್ಲದೆ ಕಬ್ಬೂರ, ಮೀರಾಪುರಹಟ್ಟಿ, ಜೋಡಟ್ಟಿ, ಮಾಡಲಗಿ, ಚಿಕ್ಕೋಡಿ ರೋಡ್, ಕೆಂಚನಟ್ಟಿ ಮುಂತಾದ ಗ್ರಾಮಗಳಿಗೆ ಕುಡಿಯುವ ನೀರಿನ ಸರಬರಾಜು ಮಾಡಲು ಯೋಜನೆಯನ್ನು ರೂಪಿಸಲಾಗುವುದು ಎಂದರು.ಗ್ರಾಮ ವ್ಯಾಪ್ತಿಯಲ್ಲಿನ ಇತರ ರಸ್ತೆಗಳ ನಿರ್ಮಾಣ ಕಾಮಗಾರಿಗಳನ್ನು ಮುಂಬರುವ ದಿನಗಳಲ್ಲಿ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.ರಾಯಬಾಗ ಶಾಸಕ ದುರ್ಯೋದನ ಐಹೊಳೆ ಅಧ್ಯಕ್ಷತೆ ವಹಿಸಿದ್ದರು.ಜಿ.ಪಂ ಸದಸ್ಯೆ ಸುನೀತಾ ಬೆಲ್ಲದ, ಸಾಗರ ಖೇಮಲಾಪುರೆ, ಸುರೇಶ ಬೆಲ್ಲದ, ಶೀತಲ ಖೇಮಲಾಪುರೆ, ಸಿದ್ದಪ್ಪಾ ಖಜಿಡೋಣಿ, ಅಕ್ಕವ್ವ ಕಾಮಗೌಡ, ಮಹಾಲಿಂಗ ಹಂಜಿ ಮುಂತಾದವರು ಉಪಸ್ಥಿತರಿದ್ದರು. ಎಸ್.ಕೆ.ಕಾಮಗೌಡ ಸ್ವಾಗತಿ ಸಿದರು. ಜಿ.ಬಿ.ಸಂಗಟೆ ನಿರೂಪಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.