ಶನಿವಾರ, ಜೂನ್ 19, 2021
24 °C

ಕುಡಿಯುವ ನೀರು ಕಲ್ಪಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್, ಕೊಳವೆ ಬಾವಿ  ಹಾಗೂ ಮೋಟರ್ ಕೆಟ್ಟಿರುವುದರಿಂದ ನೀರು ದೊರೆ ಯುತ್ತಿಲ್ಲ. ಕೂಡಲೇ ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ನೀರು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾ ವೇಳೆ ಮಾತನಾಡಿದ ಪ್ರತಿಭಟನಾ ಕಾರರು, ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಿ 2-3 ವರ್ಷಗಳು ಕಳೆದಿವೆ. ಆದರೆ ಅವುಗಳು ಈಗ ಕೆಟ್ಟು ನಿಂತರು ದುರಸ್ತಿ ಕೈಗೊಳ್ಳುವಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಫಲವಾಗಿದ್ದಾರೆ ಎಂದು ದೂರಿದರು.ಜಿಲ್ಲಾ ಪಂಚಾಯಿತಿ ಸದಸ್ಯೆ ಬಿ.ಸಾವಿತ್ರಮ್ಮ ಮಾತನಾಡಿ, ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯಲು ನೀರು ಸಿಗುತ್ತಿಲ್ಲ. ಜನತೆ ನಮ್ಮನ್ನು ಪ್ರಶ್ನಿ ಸುತ್ತಿದ್ದಾರೆ. ಅಧಿಕಾರಿಗಳು ತಮಗೆ ಏನೂ ಸಂಬಂಧ ಇಲ್ಲವೆಂಬಂತೆ ಕುಳಿತಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆಯಲಾಗುವುದು ಎಂದರು.

ಸಿಪಿಎಂ ಯುವಮುಖಂಡ ಮಂಜುನಾಥರೆಡ್ಡಿ , ಕುಡಿ ಯುವ ನೀರಿಗೆ ಇರುವ ಅನುದಾನ ಬಳಕೆಯಾಗುತ್ತಿಲ್ಲ ಎಂದು ದೂರಿದರು.ಸ್ಥಳಕ್ಕೆ ಆಗಮಿಸಿದ  ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.ಜಿಲ್ಲಾ ಪಂಚಾಯಿತಿ ಸದಸ್ಯರಾದ ನಾರಾಯಣಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ  ಶೋಭಾರಾಣಿ, ಸದಸ್ಯ ರಾದ ಶಂಕರರೆಡ್ಡಿ, ನಾರಾಯಣಪ್ಪ, ನಾರಾಯಣ್ ನಾಯಕ್, ಮಾಜಿ ಸದಸ್ಯ ವೆಂಕಟೇಶ್, ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ರಘುರಾಮರೆಡ್ಡಿ, ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.