ಮಂಗಳವಾರ, ಜೂನ್ 15, 2021
27 °C

ಕುಡಿಯುವ ನೀರು ನೀಡಿ: ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ತಾಲ್ಲೂಕಿನ ಗ್ರಾಮಾಂತರ ಪ್ರದೇಶ ಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೂರಿದ್ದು, ಕೂಡಲೇ ಕುಡಿಯುವ ನೀರು ಕಲ್ಪಿಸುವುದಕ್ಕೆ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ  ಎನ್.ಸಂಪಂಗಿ ತಿಳಿಸಿದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಟಾಸ್ಕ್‌ಪೋರ್ಸ್ ಸಭೆಯಲ್ಲಿ ಮಾತನಾಡಿದರು.

 21 ಗ್ರಾಮಗಳ ಪೈಕಿ 11 ಗ್ರಾಮಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್, ವಿದ್ಯುತ್ ಪೂರೈಕೆಗೆ ಅನುಮೋದನೆ ಸಿಕ್ಕಿದೆ. ಉಳಿದಂತೆ ನೀರಿನ ಅಭಾವವಿರುವ ಗ್ರಾಮಗಳನ್ನು ಗುರುತಿಸಿ ಕುಡಿಯುವ ನೀರು ಕಲ್ಪಿಸಲಾಗುವುದು. ಸಮರ್ಪಕ ವಿದ್ಯುತ್ ಪೂರೈಕೆಗೆ ಪಂಚಾಯಿತಿಯಿಂದ ಬೆಸ್ಕಾಂಗೆ ಹಣ ಪಾವತಿಸಬೇಕಾಗಿದೆ. ಸಮಸ್ಯೆ ಬಗ್ಗೆ ಗಮನ ಹರಿಸುವಂತೆ ಎಂಜಿನಿಯರ್ ರಮೇಶ್‌ಬಾಬು ಅವರಿಗೆ ತಿಳಿಸಿದರು.ಸರ್ಕಾರ ಬಾಗೇಪಲ್ಲಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಶಾಸಕರು ಹೇಳಿದ ಅವರು, ತಾಲ್ಲೂಕಿನಲ್ಲಿ ಮುಂಗಾರು ಮಳೆ ಬೀಳದಿರುವುದರಿಂದ ಗ್ರಾಮಾಂತರ ಪ್ರದೇಶಗಳ ಕೆರೆಗಳು ಬತ್ತಿವೆ ಎಂದು ಹೇಳಿದರು.ಜಿಲ್ಲಾ ಪಂಚಾಯಿತಿ ಸಹಾಯಕ ಎಂಜಿನಿಯರ್ ಬಸವರಾಜು ಮಾತನಾಡಿ ತಾಲ್ಲೂಕಿನ ಗುಡಿಪಲ್ಲಿ ಗ್ರಾಮದಲ್ಲಿ ವಿದ್ಯುತ್ ಸಮರ್ಪಕವಾಗಿ ಇಲ್ಲದೆ ನೀರು ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.ಸಭೆಯಲ್ಲಿ ತಾ.ಪಂ. ಅಧ್ಯಕ್ಷೆ ಶೋಭಾರಾಣಿ, ತಹಶೀಲ್ದಾರ್ ಟಿ.ಎ.ಹನುಮಂತರಾಯ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್.ಜಯರಾಂ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.