ಮದ್ದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರು ಇಲ್ಲಿನ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ವಿರುದ್ಧ ಘೋಷಣೆ ಕೂಗಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ವೆಂಕಟೇಗೌಡ ಮಾತನಾಡಿ, ಕಳೆದ ಮೂರು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉದ್ಭವಿಸಿದೆ. ವಿದ್ಯುತ್ ಅಭಾವದ ನೆಪವೊಡ್ಡುವ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಾಕಷ್ಟು ನೀರಿನ ಲಭ್ಯತೆಯಿದ್ದರೂ ನೀರು ಒದಗಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಪ್ರತಿನಿತ್ಯ ಮಹಿಳೆಯರು ಮಕ್ಕಳು ಎರಡು ಮೂರು ಕಿ.ಮೀ ದೂರವಿರುವ ಖಾಸಗಿ ಪಂಪ್ಹೌಸ್ಗಳಿಗೆ ತೆರಳಿ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಪಿಡಿಒ ಚಂದ್ರು ಪ್ರತಿಭಟನಾನಿರತರನ್ನು ಸಮಾಧಾನಪಡಿಸಿದರು. ಇನ್ನೊಂದು ವಾರದೊಳಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ಆ ವರೆಗೆ ತಾತ್ಕಾಲಿಕವಾಗಿ ಟ್ಯಾಂಕರ್ಗಳ ಮೂಲಕ ನೀರು ಒದಗಿಸುವ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.

ಮುಖಂಡರಾದ ಅಲ್ಲಬಕಾಸ್, ರತ್ನಮ್ಮ, ಐಶಾ, ಜಯಮ್ಮ, ಷಾಹಿನಾ, ರಿಹಾನ್, ನಗೀನ್, ಪುಟ್ಟಮ್ಮ, ಶಿವನಂಜಮ್ಮ ಸೇರಿದಂತೆ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.