ಕುಡಿಯುವ ನೀರು ಪೂರೈಕೆಗೆ ಗ್ರಾಮಸ್ಥರ ಆಗ್ರಹ

7

ಕುಡಿಯುವ ನೀರು ಪೂರೈಕೆಗೆ ಗ್ರಾಮಸ್ಥರ ಆಗ್ರಹ

Published:
Updated:
ಕುಡಿಯುವ ನೀರು ಪೂರೈಕೆಗೆ ಗ್ರಾಮಸ್ಥರ ಆಗ್ರಹ

ಬಾಗೇಪಲ್ಲಿ: ತಾಲ್ಲೂಕಿನ ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕೂಡಲೇ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಪಟ್ಟಣದ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. `ಕುಡಿಯಲು ನೀರು ಪೂರೈಸದೆ ಜಿಲ್ಲಾ ಪಂಚಾಯಿತಿ ತಾಂತ್ರಿಕ ಇಲಾಖೆಯು ನಿರ್ಲಕ್ಷ್ಯ ತೋರುತ್ತಿದೆ. ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸುವತ್ತ ಅಗತ್ಯ ಕ್ರಮ ತೆಗೆದುಕೊಳ್ಳಬೇಕು~ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ತಾಲ್ಲೂಕು ಪಂಚಾಯಿತಿ ಸದಸ್ಯ ಬೂರಗುಮಡುಗು ಲಕ್ಷ್ಮೀನರಸಿಂಹಪ್ಪ ಮಾತನಾಡಿ `ತಾಲ್ಲೂಕಿನ ಕಾನಗಮಾಕಲಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರದಯ್ಯಗಾರಿಪಲ್ಲಿ, ಬುಟ್ಟಿವಾರಿಪಲ್ಲಿ, ಮೂಗುಚಿನ್ನೇಪಲ್ಲಿ, ಸೋಲಮಾಕಲಪಲ್ಲಿ, ಅರಿಗೆಪಲ್ಲಿ ಗ್ರಾಮಗಳಲ್ಲಿ ನಾಲ್ಕು ತಿಂಗಳಿಂದ ಕುಡಿಯುವ ನೀರಿನ ಅಭಾವ ಇದೆ. ಅಂತರ್ಜಲ ಬತ್ತುತ್ತಿರುವುದರಿಂದ ಗ್ರಾಮಗಳಲ್ಲಿ ಕೊಳವೆಬಾವಿಗಳು ಬರಿದಾಗುತ್ತಿವೆ.ಜಾನುವಾರುಗಳಿಗೆ ನೀರೇ ಸಿಗುತ್ತಿಲ್ಲ. ಕೂಡಲೇ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ಗ್ರಾಮಗಳಿಗೆ ನೀರು ಪೂರೈಸುವಂತಹ ವ್ಯವಸ್ಥೆ ಮಾಡಬೇಕು~ ಎಂದು ಆಗ್ರಹಿಸಿದರು. ಪ್ರತಿಭಟನಾಕಾರರಿಂದ ಮನವಿಪತ್ರ ಸ್ವೀಕರಿಸಿದ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಸವರಾಜ್, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.ಕಾಗನಮಾಕಲಪಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಆನಂದ, ನರಸಿಂಹಪ್ಪ, ನಾರಾಯಣಪ್ಪ, ಕಿರಣ್‌ಕುಮಾರ್, ಅಶ್ವತ್ಥಪ್ಪ, ವೆಂಕಟರವಣಪ್ಪ, ನಂದೀಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry