ಬೆಳಗಾವಿ: ಬೆಳಗಾವಿ ವಿಭಾಗಮಟ್ಟದ ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ವಿವಿಧ ರೈತ ಸಂಘಟನೆಗಳು ಹಾಗೂ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ಕುರಿತು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ ಅವರು, ಕಳಸಾ–ಬಂಡೂರಿ ನಾಲಾ ತಿರುವು ಯೋಜನೆಯು ಬೆಳಗಾವಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ 12 ತಾಲ್ಲೂಕುಗಳ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅನುಕೂಲಕರವಾಗಿದೆ.

ಸಸಾಲಟ್ಟಿ ಏತ ನೀರಾವರಿ ಯೋಜನೆಯು ಜಮಖಂಡಿ, ಮುಧೋಳ, ಬೀಳಗಿ, ರಾಯಬಾಗ ತಾಲ್ಲೂಕುಗಳ 1 ಲಕ್ಷ ಎಕರೆ ಕೃಷಿಭೂಮಿ ಹಾಗೂ ವೀರಭದ್ರೇಶ್ವರ ಏತ ನೀರಾವರಿ ಯೋಜನೆಯು ರಾಮದುರ್ಗ, ಮುಧೋಳ ಹಾಗೂ ಸವದತ್ತಿ ತಾಲ್ಲೂಕುಗಳ 33 ಹಳ್ಳಿಗಳ 55 ಸಾವಿರ ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಈ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಅಥಣಿ ತಾಲ್ಲೂಕಿನ ಬಸವೇಶ್ವರ ಏತ ನೀರಾವರಿ ಹಾಗೂ ಕರಿ ಮಸೂತಿ ಏತ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಚಿಕ್ಕೋಡಿ ತಾಲ್ಲೂಕಿನ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯಿಂದ 4,861 ಹೆಕ್ಟೇರ್ ಪ್ರದೇಶ ಹಾಗೂ ಹುಕ್ಕೇರಿ ತಾಲ್ಲೂಕಿನ ಕೊಚೇರಿ ಬ್ಯಾರೇಜ್ನಿಂದ 1,200 ಹೆಕ್ಟೇರ್ ಪ್ರದೇಶವನ್ನು ನೀರಾವರಿಗೊಳಿಸಬೇಕು. ಗೋಕಾಕ ತಾಲ್ಲೂಕಿನ ಮೇಲ್ಮಟ್ಟಿ ಕುಡಿಯುವ ನೀರಿನ ಯೋಜನೆಗೆ ತಕ್ಷಣವೇ ಮಂಜೂರಾತಿ ನೀಡಬೇಕು. ಮುಧೋಳ ತಾಲ್ಲೂಕಿನ ಮೆಟಗುಡ್ಡ ಹಾಗೂ ಇತರೆ 7 ಹಳ್ಳಿಗಳ ಕೆರೆ ತುಂಬುವ ಯೋಜನೆಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದರು.

ಬಿ.ಎಂ.ಮಳಲಿ, ಚನ್ನಪ್ಪ ಪೂಜಾರಿ, ಬಾಳಪ್ಪ ಭಾವೀಕಟ್ಟಿ, ಮಹಾದೇವ ಯರಗಟ್ಟಿ, ಎಂ.ಸಿ.ತಾಂಬೋಳಿ, ನಿತಿನ್ ನಾಯಕವಾಡಿ, ಪ್ರಕಾಶ ಅಷ್ಟೇಕರ, ಲಕ್ಷ್ಮಣ ಅವಸೂರ, ಗುರು ಅಮರೇಂದ್ರ, ಮುತ್ತು ಅಂಗಡಿ, ಆಲಂ ಸನದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅಸ್ವಸ್ಥಗೊಂಡ ರೈತ: ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿ ಗ್ರಾಮದ ರೈತ ಬಸಪ್ಪ ನಂಜೆಣ್ಣವರ (48) ಎಂಬುವರು ಅಸ್ವಸ್ಥರಾಗಿ ಕುಸಿದು ಬಿದ್ದ ಪ್ರಸಂಗ ನಡೆಯಿತು. ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.