ಕಂಪ್ಲಿ: ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ನಾಯಕ ತಿಳಿಸಿದರು.ಕಂಪ್ಲಿ ಸಮೀಪದ ಅರಳಿಹಳ್ಳಿ ತಾಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ತಗ್ಗು ಗುಂಡಿ ಮುಚ್ಚಿದ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂಡೂರು ತಾಲ್ಲೂಕಿನ 9 ಹಳ್ಳಿಗಳಲ್ಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕು ಮೂರು ಹಳ್ಳಿಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಇದೆ. ಈಗಾಗಲೇ ಸಂಡೂರಿನ 6 ಹಳ್ಳಿಗಳಲ್ಲಿ, ಹಗರಿಬೊಮ್ಮನಹಳ್ಳಿಯ ಒಂದು ಹಳ್ಳಿಯಲ್ಲಿ ಶಾಶ್ವತ ಕುಡಿವ ನೀರಿನ ಯೋಜನೆ ಪೂರ್ಣಗೊಳಿಸಿದೆ. ಜೊತೆಗೆ ರಾಯರ ಮಠದ ವ್ಯಾಸತೀರ್ಥ ಟ್ಯಾಂಕ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ವಿವರಿಸಿದರು.

ಕಂಪ್ಲಿ ಪಟ್ಟಣದಲ್ಲಿ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ ಒದಗಿಸುವ ಕುರಿತು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದರು. ರಸ್ತೆ ಬದಿ ಶಾಲೆಗಳಿಗೆ ಆವರಣ ಗೋಡೆ ಸೇರಿ ಮೂಲ ಸೌಕರ್ಯಗಳನ್ನು ಒದಗಿಸಲು ಪ್ರಾಧಾನ್ಯತೆ ನೀಡಲಾಗುವುದು. ಜಿ.ಪಂ ವಿವಿಧ 26 ಇಲಾಖೆಗಳ ಕರಡು ಕ್ರಿಯಾ ಯೋಜನೆ ರೂಪಿಸಿ ಚರ್ಚಿಸಲಾಗಿದ್ದು, ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಪಡೆಯಬೇಕಿದೆ ಎಂದು ತಿಳಿಸಿದರು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುಡಿವ ನೀರಿನ ಯೋಜನೆಗಳ ಕಾಮಗಾರಿಗಳ ಪರಿಶೀಲನೆ ಮಾಡುತ್ತಿದ್ದು, ಮುಂದುವರಿದ ಕಾಮಗಾರಿಗಳ ತ್ವರಿತ ಚಾಲನೆ ನೀಡಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಹೊಸಪೇಟೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಾಲಸ್ವಾಮಿ ದೇಶಪ್ಪ, ಜಿ.ಪಂ ಎಇಇ ಡಿ.ವಿ. ವೆಂಕಟರಾಜು, ಸಣಾಪುರ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಹನುಮಂತಪ್ಪ, ಉಪಾಧ್ಯಕ್ಷ ಭಾಸ್ಕರರೆಡ್ಡಿ, ಸದಸ್ಯ ಗವಿಸಿದ್ದಪ್ಪ, ಮುಖ್ಯಗುರು ಯರ್ರಿಸ್ವಾಮಿ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.