ದೇವನಹಳ್ಳಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ತಾ.ಪಂ. ಅಧ್ಯಕ್ಷ ಬಿ.ಶಿವಣ್ಣ ಅವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಯಾವುದೇ ಮೂಲದಿಂದಲೂ ನೀರಿನ ಸೌಲಭ್ಯ ದೊರಕುತ್ತಿಲ್ಲ.

ಆದ್ದರಿಂದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಒತ್ತಾಯಿಸಿ ಸಿ.ಎಂ ಬಳಿ ನಿಯೋಗ ಕೊಂಡೊಯ್ಯಲು ಮತ್ತು ಮುಂಗಾರು ಮಳೆ ಆರಂಭವಾಗಿದ್ದು ಕೃಷಿಕರಿಗೆ ಸಕಾಲದಲ್ಲಿ ಬೀಜ, ರಸಗೊಬ್ಬರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ತಾಲ್ಲೂಕಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿಯಲ್ಲಿ ಟಿಪ್ಪು ಸುಲ್ತಾನ್ ಜನ್ಮ ಸ್ಥಳ, ಐತಿಹಾಸಿಕ ಕೋಟೆ ಮತ್ತು ತಾಲ್ಲೂಕಿನ ವಿವಿಧೆಡೆ ಪುರಾತನ ದೇವಾಲಯಗಳಿದ್ದು ಪ್ರವಾಸಿ ತಾಣವನ್ನಾಗಿ ರೂಪಿಸಬೇಕು. ಜೊತೆಗೆ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ತಾ.ಪಂ ಅಧ್ಯಕ್ಷ ಬಿ.ಕೆ. ಶಿವಣ್ಣ ಮಾತನಾಡಿ, ವಿಮಾನ ನಿಲ್ದಾಣಕ್ಕಾಗಿ ತಾಲ್ಲೂಕಿನ ರೈತರಿಂದ ಸ್ವಾಧೀನ ಪಡಿಸಿಕೊಂಡ ಭೂಮಿಗೆ ಇಲ್ಲಿಯವರೆಗೂ ಸೂಕ್ತ ಪರಿಹಾರ ನೀಡಿಲ್ಲ. ಅವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದರು. ತಾ.ಪಂ ಉಪಾಧ್ಯಕ್ಷೆ ಪ್ರಭಾ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುರೇಶ್, ತಾ.ಪಂ. ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.