ಬೆಂಗಳೂರು: ನಾರಾಯಣ ಹೃದಯಾಲಯವು ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಇತ್ತೀಚೆಗೆ ಏಳನೇ ಹೃದಯ ಚಿಕಿತ್ಸಾ ಕೇಂದ್ರವನ್ನು ತೆರೆದಿದೆ. ಪಿಇಎಸ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ. ದೇವಿಶೆಟ್ಟಿ ಮಾತನಾಡಿ, ಹಿಂದುಳಿದ ಕ್ಷೇತ್ರಗಳ ಜನರಿಗೆ ಗುಣಮಟ್ಟದ ಹೃದಯ ಚಿಕಿತ್ಸೆಯನ್ನು ಒದಗಿಸುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಬೆಂಗಳೂರಿನಿಂದ ಚಿತ್ತೂರಿಗೆ ಎರಡು ಗಂಟೆಗಳ ಪ್ರಯಾಣದ ಅವಧಿ ಇದೆ. ತುರ್ತು ಸಂದರ್ಭಗಳಲ್ಲಿ ವೈದ್ಯರು ಸುಲಭವಾಗಿ ಹಾಗೂ ವೇಗವಾಗಿ ಧಾವಿಸಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಕುಪ್ಪಂ ಗ್ರಾಮವು ಮೂರು ರಾಜ್ಯಗಳು ಸಂಧಿಸುವ ಆಯಕಟ್ಟಿನ ಸ್ಥಳದಲ್ಲಿದ್ದು ಸುತ್ತಮುತ್ತಲಿನ ಗ್ರಾಮಗಳು ಉತ್ತಮ ಹೃದಯ ಚಿಕಿತ್ಸೆ ಪಡೆಯಲು ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕುಪ್ಪಂನಲ್ಲಿರುವ ಚಿಕಿತ್ಸಾ ಕೇಂದ್ರದ ಹೊರ ರೋಗಿಗಳ ವಿಭಾಗದಲ್ಲಿ ಆರು ತಿಂಗಳ ಕಾಲ ಉಚಿತ ತಪಾಸಣೆ, ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕರ್ನಾಟಕ, ಆಂಧ್ರಪ್ರದೇಶದ ಗಡಿಭಾಗದ ಬಂಗಾರಪೇಟೆ, ಕೆಜಿಎಫ್, ಮಾಲೂರು ಮತ್ತು ಮುಳಬಾಗಿಲಿನ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಈ ಸಮೂಹವು ಬೆಂಗಳೂರಿನಲ್ಲಿ ಮೂರು, ದಾವಣಗೆರೆ, ಕೋಲಾರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತಲಾ ಒಂದು ಚಿಕಿತ್ಸಾ ಕೇಂದ್ರಗಳನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕೇಂದ್ರವನ್ನು ತೆರೆಯುವ ಯೋಚನೆ ಇದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.