ಕುಮಾರಸ್ವಾಮಿ ಪ್ರತಿಕೃತಿ ದಹನ

7

ಕುಮಾರಸ್ವಾಮಿ ಪ್ರತಿಕೃತಿ ದಹನ

Published:
Updated:

ಶಿವಮೊಗ್ಗ: ಕಾಂಗ್ರೆಸ್ ಮಾಜಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಜೆಡಿಎಸ್ ರಾಜ್ಯ  ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಜಿಲ್ಲಾ ಡಿ.ಕೆ. ಶಿವಕುಮಾರ್ ಯುವ ಅಭಿಮಾನಿಗಳ ಸಂಘ, ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಸೋಮವಾರ  ಗೋಪಿವೃತ್ತದಲ್ಲಿ ಕುಮಾರಸ್ವಾಮಿ ಪ್ರತಿಕೃತಿ ದಹಿಸಿ, ಪ್ರತಿಭಟನೆ ನಡೆಸಿದವು. ಶಿವಕುಮಾರ್ ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ದಾರಿ ತಪ್ಪಿದ ಮಗನಾಗಿದ್ದಾರೆ ಎಂದು ಹೇಳಿ ಕುಮಾರಸ್ವಾಮಿ ಅವಮಾನ ಮಾಡಿದ್ದಾರೆ. ಆದರೆ, ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡವರು ಕುಮಾರಸ್ವಾಮಿ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮೈಸೂರು ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಕೇವಲ ಅಧಿಕಾರ ಕ್ಕಾಗಿ ಬಿಜೆಪಿ ಜೊತೆಗೆ ಕೈ ಜೋಡಿಸಿದ ಕುಮಾರಸ್ವಾಮಿ ಅವರಿಗೆ ಯಾರ ಬಗ್ಗೆ ಮಾತನಾಡುವುದಕ್ಕೂ ನೈತಿಕತೆ ಇಲ್ಲ. ಇಂತಹವರು ಶಿವಕುಮಾರ್ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ತಕ್ಷಣ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಅಲ್ಲದೇ, ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಅಭಿಮಾನಿಗಳ ಸಂಘದ ಅಧ್ಯಕ್ಷ ಆರ್. ಮೋಹನ್, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮುಖಂಡರಾದ ರಮೇಶ್ ಹೆಗ್ಡೆ, ರವಿಕುಮಾರ್, ಎಸ್.ಪಿ. ದಿನೇಶ್, ದೇವೇಂದ್ರಪ್ಪ, ಸಂತೆಕಡೂರು ವಿಜಯಕುಮಾರ್, ಮಧುಸೂದನ್, ಪ್ರವೀಣ್ ಪಟೇಲ್, ಆರ್. ರಂಗನಾಥ್, ರಂಜಿತ್, ಯೋಗೀಶ್ ಮತ್ತಿತರರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry