ಮಂಗಳವಾರ, ಅಕ್ಟೋಬರ್ 15, 2019
29 °C

ಕುಮಾರಸ್ವಾಮಿ ರಾಜೀನಾಮೆ ಇಲ್ಲ

Published:
Updated:

ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಬುಧವಾರ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.ಪಕ್ಷದ ಹಿರಿಯ ನಾಯಕರು ಸಮಸ್ಯೆಯನ್ನು ಬಗೆಹರಿಸುವ ವಿಶ್ವಾಸವಿದೆ. ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಸೇರಿದಂತೆ ಹಿರಿಯ ಮುಖಂಡರೊಂದಿಗೆ ಚರ್ಚಿಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.ಪಕ್ಷದಲ್ಲಿ ತಮ್ಮನ್ನು ತುಳಿಯುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಪ್ರಕಟಿಸಿದ್ದರು. ಆದರೆ ಶಾಸಕ ಡಿ.ಎನ್.ಜೀವರಾಜ್ ಸೇರಿದಂತೆ ಕೆಲವರ ಮಧ್ಯಸ್ಥಿಕೆಯಿಂದಾಗಿ ಕುಮಾರಸ್ವಾಮಿ ಸದ್ಯಕ್ಕೆ ರಾಜೀನಾಮೆ ನೀಡದೆ ಇರುವ ನಿರ್ಧಾರಕ್ಕೆ ಬಂದಿದ್ದಾರೆ.

Post Comments (+)