ಬೆಂಗಳೂರು: ಕೆಂಗೇರಿ ಹೋಬಳಿ ಹಲಗೆವಡೇರಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿದ್ದ 2.24 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಮತ್ತೊಂದು ಖಾಸಗಿ ದೂರು ಸಲ್ಲಿಕೆಯಾಗಿದೆ.

ಥಣಿಸಂದ್ರ ಗ್ರಾಮದ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕುಮಾರಸ್ವಾಮಿ ವಿರುದ್ಧ ದೂರು ಸಲ್ಲಿಸಿದ್ದ ಚಾಮರಾಜನಗರ ಜಿಲ್ಲೆ ಸಂತೆಮರಳ್ಳಿಯ ಮಹದೇವಸ್ವಾಮಿ ಅವರೇ ಈ ದೂರನ್ನು ಸಲ್ಲಿಸಿದ್ದಾರೆ.

ಗುರುವಾರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ಎದುರು ಹಾಜರಾದ ಅವರು, ಖಾಸಗಿ ದೂರು ಸಲ್ಲಿಸಿದರು. ದೂರನ್ನು ಅಂಗೀಕರಿಸುವ ಸಂಬಂಧ ಶುಕ್ರವಾರ ವಿಚಾರಣೆ ನಡೆಸುವುದಾಗಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಪ್ರಕಟಿಸಿದರು.

ದೂರಿನಲ್ಲಿರುವ ಆರೋಪ: ಬನಶಂಕರಿ ಐದನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 1995ರಲ್ಲಿ ಹಲಗೆವಡೇರಹಳ್ಳಿಯ ಸರ್ವೆ ನಂಬರ್ 128ರ 1.10 ಎಕರೆ ಮತ್ತು ಸರ್ವೆ ನಂಬರ್ 137ರ 1.14 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವುದಕ್ಕೆ ಅರ್ಜಿ ಸಲ್ಲಿಸುವ ಮುನ್ನವೇ ಭೂಮಿಯ ಮಾಲೀಕರಾದ ಪದ್ಮಾ, ಶ್ರೀದೇವಿ ಮತ್ತು ಚೇತನ್ಕುಮಾರ್ ಅವರು ಶಾಂತಮ್ಮ ಹಾಗೂ ರೇಖಾ ಚಂದ್ರಶೇಖರ್ ಎಂಬುವರಿಗೆ ಮಾರಾಟ ಮಾಡಿದ್ದರು.

2004ರಲ್ಲಿ ಭೂಮಿ ಮಾರಿ, 2005ರಲ್ಲಿ ಈ 2.24 ಎಕರೆ ಭೂಮಿಯನ್ನೂ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿದ್ದರು.

ಆ ಬಳಿಕ ಶಾಂತಮ್ಮ ಮತ್ತು ರೇಖಾ ಅವರು ಇತರೆ ಎಂಟು ಜನರಿಗೆ ಭೂಮಿಯನ್ನು ಮಾರಿದರು. ಈ ಎಂಟು ಜನರು ನಾಲ್ಕು ರಿಯಲ್ ಎಸ್ಟೇಟ್ ಕಂಪೆನಿಗಳನ್ನು ಸ್ಥಾಪಿಸಿ, ಅವುಗಳ ಹೆಸರಿಗೆ ಭೂಮಿಯನ್ನು ವರ್ಗಾಯಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಕಡತವನ್ನು ಮೂರು ಬಾರಿ ವಾಪಸ್ ಕಳುಹಿಸಲಾಯಿತು. ಮತ್ತೊಮ್ಮೆ ಈ ಪ್ರಕರಣದಲ್ಲಿ ಅರ್ಜಿದಾರರ ಬೇಡಿಕೆಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂಬ ತೀರ್ಮಾನದೊಂದಿಗೆ, ಕಡತವನ್ನು ಮುಕ್ತಾಯಗೊಳಿಸಲಾಯಿತು.

ಆದರೆ, 2007ರ ಸೆಪ್ಟೆಂಬರ್ 25ರಂದು ದಿಢೀರನೆ ಕಡತ ವಾಪಸ್ ತರಿಸಿಕೊಂಡ ಎಚ್.ಡಿ. ಕುಮಾರಸ್ವಾಮಿ, ಅರ್ಜಿದಾರರ ಪರವಾಗಿ ಆದೇಶ ಹೊರಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

`ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಹುದ್ದೆ ತ್ಯಜಿಸುವ 12 ದಿನಗಳ ಮುನ್ನ ಈ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವ ಆದೇಶ ಹೊರಡಿಸಿದ್ದರು. ಅವರು ವೈಯಕ್ತಿಕ ಲಾಭಕ್ಕಾಗಿ ಇಂತಹ ಕ್ರಮ ಕೈಗೊಂಡಿದ್ದರು. ಭೂಮಿಯ ಮೂಲ ಮಾಲೀಕರು ಇಂತಹ ಸಂಚು ರೂಪಿಸಿ, ಮೊದಲೇ ಈ ಭೂಮಿಯನ್ನು ಮಾರಿದ್ದರು. ಇದರಿಂದ ಸರ್ಕಾರಕ್ಕೆ ಅಪಾರ ನಷ್ಟ ಉಂಟಾಗಿದೆ~ ಎಂದು ದೂರಿದ್ದಾರೆ.

ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ದಂಡ ಸಂಹಿತೆ, ಭೂ ಪರಭಾರೆ ನಿಯಂತ್ರಣ ಕಾಯ್ದೆಗಳ ವಿವಿಧ ಕಲಮುಗಳ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಮಹದೇವಸ್ವಾಮಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.