ಬುಧವಾರ, ಅಕ್ಟೋಬರ್ 23, 2019
25 °C

ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಪೂಜೆ

Published:
Updated:

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಅವರು ಗುರುವಾರ ಇಲ್ಲಿನ ಸದಾಶಿವನಗರದ ನಿವಾಸದಲ್ಲಿ  ತಮ್ಮ ತಂದೆಯ ವೈಕುಂಠ ಸಮಾರಾಧನೆ ನಡೆಸಿದರು.ಸದಾಶಿವನಗರದ ನಿವಾಸದಲ್ಲಿ ಕೆಲ ಹಿರಿಯರ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಕುಮಾರ್ ಬಂಗಾರಪ್ಪ, ನಂತರ ಬಂಗಾರಪ್ಪ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

 

ಬಳಿಕ ಕುಟುಂಬದ ಸಂಪ್ರದಾಯದ ಪ್ರಕಾರ ಕಾರ್ಯಗಳನ್ನು ನೆರವೇರಿಸಿದರು. ಕುಮಾರ್ ಬಂಗಾರಪ್ಪ ಅವರ ಕುಟುಂಬದ ಸದಸ್ಯರು, ಬಂಗಾರಪ್ಪ ಅವರಿಗೆ ಅತ್ಯಂತ ಆತ್ಮೀಯರಾಗಿದ್ದ ಕೆಲ ಹಿರಿಯರು ಮತ್ತು ಸಮೀಪದ ಬಂಧುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)