ಶನಿವಾರ, ಏಪ್ರಿಲ್ 17, 2021
23 °C

ಕುರಿಕೋಟಾ: ಸೇತುವೆ ದುರಸ್ತಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಮಲಾಪುರ: ಕುರಿಕೋಟಾ ಸೇತುವೆ ದುರಸ್ತಿ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು. ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ಗುರುವಾರ ತಾಲ್ಲೂಕು ಪಂಚಾಯಿತಿ ಸದಸ್ಯ ಅಮೃತಗೌರೆ ನೇತೃತ್ವದಲ್ಲಿ ಕಮಲಾಪುರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.ಸಂಪರ್ಕ ಇಲ್ಲದ ಕಾರಣ ಕಮಲಾಪುರ ಹಾಗೂ ಮಹಾಗಾಂವನ ಜನತೆಗೆ ಗುಲ್ಬರ್ಗಕ್ಕೆ ಬರುವುದು ಹರಸಾಹಸವಾಗಿದೆ. ಈ ತೊಂದರೆಯನ್ನು ಗಮನಿಸಿ, ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.ಸಚಿವ ರೇವುನಾಯಕ ಬೆಳಮಗಿ, ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ ಮಹಾಗಾಂವ, ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರರು ಚರ್ಚಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು. ದಿನನಿತ್ಯ ಓಡಾಡುವ ಶಾಲಾ ಮಕ್ಕಳು, ವೃದ್ಧರು, ಮಹಿಳೆಯರಿಗೆ ಅನುಕೂಲವಾಗುವಂತೆ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಸ್ಥಳೀಯ ಪ್ರಯಾಣಿಕರಿಗೆ ಖಾಸಗಿ ವಾಹನಗಳಿಂದ ಭಾರಿ ತೊಂದರೆಯಾಗುತ್ತಿದೆ. ಕಮಲಾಪುರ ಗ್ರಾಮದಿಂದ ಕುರಿಕೋಟಾ ಸೇತುವೆವರೆಗೂ ನಾಲ್ಕು ಸರ್ಕಾರಿ ಬಸ್‌ಗಳು ಮತ್ತು ಕುರಿಕೋಟಾ ಸೇತುವೆಯಿಂದ ಗುಲ್ಬರ್ಗಕ್ಕೆ ನಾಲ್ಕು ಬಸ್‌ಗಳ ವ್ಯವಸ್ಥೆಯಾಗಬೇಕು ಎಂದು ಮನವಿ ಮಾಡಿದರು.ಶಿಥಿಲಗೊಂಡ  ಸೇತುವೆಯ ದುರಸ್ತಿ ಮಾಡುವಲ್ಲಿ ವಿಳಂಬವಾದರೆ ನಾವು ಸಾರ್ವಜನಿಕರೊಂದಿಗೆ ಬೀದಿಗಿಳಿದು ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳುತ್ತೆವೆ ಎಂದು ಎಚ್ಚರಿಸಿದರು.ಈ ಸೇತುವೆಯ ಮೇಲೆ ಬೈಕ್‌ಗಳನ್ನು ಹೊರತುಪಡಿಸಿ ಎಲ್ಲ ವಾಹನಗಳ ಪ್ರಯಾಣ ನಿಷೇಧಿಸಲಾಗಿದೆ. ಇದರಿಂದ ಪ್ರಯಾಣಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು `ಪ್ರಜಾವಾಣಿ~ಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.