ಶನಿವಾರ, ಮೇ 15, 2021
24 °C

ಕುರುಗೋಡು: ವಸತಿ ರಹಿತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುರುಗೋಡು: ಸಮೀಪದ ಬಾದನಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಬಸವ ವಸತಿ ಯೋಜನೆಯ ಮನೆಗಳನ್ನು ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿ ವಸತಿ ರಹಿತರ ಹಿತರಕ್ಷಣಾ ಸಮಿತಿ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.ಗ್ರಾಮದ ಪ್ರಮುಖ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ವಸತಿ ರಹಿತರು, ಪ್ರಸಕ್ತ ವರ್ಷ ಮಂಜೂರಾಗಿರುವ 83 ಮನೆಗಳನ್ನು ಗ್ರಾಮ ಪಂಚಾಯ್ತಿ ಸದಸ್ಯರ ಒತ್ತಡಕ್ಕೆ ಮಣಿದು ಆಯ್ಕೆ ಮಾಡಲಾಗಿದೆ. ಈ ಪಟ್ಟಿಯನ್ನು ಕೈಬಿಟ್ಟು, ಅರ್ಹ ಫಲಾನುಭವಿಗಳನ್ನು ಗ್ರಾಮ ಸಭೆಯಲ್ಲಿ ಆಯ್ಕೆಮಾಡಬೇಕು ಎಂದು ಒತ್ತಾಯಿಸಿದರು.ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಟಿ.ಎಚ್.ಸುರೇಶ್‌ಬಾಬು ಮನವಿ ಸ್ವೀಕರಿಸಿ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಆಯ್ಕೆ ಮಾಡಿದ ಪಟ್ಟಿಯಲ್ಲಿ ವಸತಿ ರಹಿತರ ಪಟ್ಟಿಯಲ್ಲಿರುವ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ದೋಷ ಕಂಡುಬಂದಲ್ಲಿ ಆಯ್ಕೆ ರದ್ದು ಮಾಡುವ ಭರವಸೆ ನೀಡಿದರು. ಶಾಸಕರ ಭರವಸೆ ಮೇರೆಗೆ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಯಿತು. ಎಚ್.ಎಂ.ವಿಶ್ವನಾಥಸ್ವಾಮಿ, ಗಾಳಿ ಬಸವರಾಜ ನೇತೃತ್ವ ವಹಿಸಿದ್ದರು. ಮೆಟ್ರಿನಿಂಗಪ್ಪ, ಬಿ.ಪಕ್ಕಿರಮ್ಮ, ವೈ.ಪದ್ಮಾವತಿ, ಎಚ್.ಹನುಮಂತಪ್ಪ, ನಿಂಗಪ್ಪ, ಅಂಜಿನಪ್ಪ, ಎಚ್.ರಾಘವೇಂದ್ರ ಸೇರಿದಂತೆ ನೂರಾರು ಜನ ವಸತಿ ರಹಿತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.