ಕುಲಪತಿ ಅಮಾನತಿಗೆ ಒತ್ತಾಯ

7
ಕುವೆಂಪು ವಿವಿ ದೂರಶಿಕ್ಷಣ ಪರೀಕ್ಷೆಯಲ್ಲಿ ನಕಲು ಪ್ರಕರಣ

ಕುಲಪತಿ ಅಮಾನತಿಗೆ ಒತ್ತಾಯ

Published:
Updated:

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಕುಲಪತಿ ಪ್ರೊ.ಎಸ್‌.ಎ.ಬಾರಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಸೋಮವಾರ ಅವರು ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.ಕುವೆಂಪು ವಿಶ್ವವಿದ್ಯಾಲಯದ ದೂರ ಶಿಕ್ಷಣ ವಿಭಾಗದ ಬಹಳಷ್ಟು ಪರೀಕ್ಷಾ ಕೇಂದ್ರಗಳಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದರೂ ಕುಲಪತಿ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ನಕಲು ಪ್ರಕರಣಗಳಿಗೆ ಕುಲಪತಿ ಅವರೇ ನೇರ ಹೊಣೆಯಾಗಿದ್ದು, ಕೂಡಲೇ ರಾಜ್ಯಪಾಲರು ಸಾಮೂಹಿಕ ನಕಲು ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಿ, ಕುಲಪತಿ ಅವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯ ನೇತೃತ್ವವನ್ನು ಎನ್‌ಎಸ್‌ಯುಐ ಪದಾಧಿಕಾರಿಗಳಾದ ಸಿ.ಜಿ.ಮಧುಸೂಧನ್, ಕೆ.ಚೇತನ್, ವಿಕಾಸ್, ಭರತ್, ವಿನಯ್, ಶ್ರೀಜಿತ್, ಸಂತೋಷ್, ಕಾರ್ತಿಕ್ ಮತ್ತಿತರರು ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry