ಕುಲಪತಿ ನೇಮಕ: ದಾಖಲೆಗೆ ಆದೇಶ

7

ಕುಲಪತಿ ನೇಮಕ: ದಾಖಲೆಗೆ ಆದೇಶ

Published:
Updated:

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಎಚ್.ಮಹೇಶಪ್ಪ ಅವರನ್ನು ಯಾವ ಆಧಾರದ ಮೇಲೆ ನೇಮಕ ಮಾಡಲಾಗಿದೆ ಎಂಬ ಕುರಿತಾದ ಮೂಲ ದಾಖಲೆಗಳನ್ನು ನೀಡುವಂತೆ ಹೈಕೋರ್ಟ್ ಶುಕ್ರವಾರ ಸರ್ಕಾರಕ್ಕೆ ಆದೇಶಿಸಿದೆ.ವಿದ್ಯಾರ್ಹತೆ ಹಾಗೂ ಅನುಭವಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ನೀಡುವ ಮೂಲಕ ನೇಮಕಗೊಂಡಿರುವ ಆರೋಪದ ಇವರ ಮೇಲಿದೆ. ಇವರ ನೇಮಕಾತಿಯನ್ನು ಪ್ರಶ್ನಿಸಿ ಜೆ.ಎಚ್.ಅನಿಲ್‌ಕುಮಾರ್ ಹಾಗೂ ಇತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.`ಮೈಸೂರು ವಿ.ವಿ.ಯ ಎಂಜಿನಿಯರಿಂಗ್ ಪದವಿಯಲ್ಲಿ ದ್ವಿತೀಯ ದರ್ಜೆ ಪಡೆದಿರುವ ಇವರು ಪ್ರಥಮ ದರ್ಜೆ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ನಾಲ್ವರು ಪಿಎಚ್‌ಡಿ ಹಾಗೂ 15 ಎಂ.ಟೆಕ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿರುವ ಬಗ್ಗೆ, 2010ರ ಮಾರ್ಚ್ 5ರಂದು ಒಂದೇ ದಿನ ನಾಲ್ಕು ಪ್ರಬಂಧ ಮಂಡಿಸಿರುವ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ ಎನ್ನುವುದು ಪ್ರಮುಖ ಆರೋಪ. ವಿಚಾರಣೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry