ಬುಧವಾರ, ಜೂನ್ 16, 2021
22 °C

ಕುಲಪತಿ ಪ್ರಭುದೇವ್ ವಿರುದ್ಧ ಜಾತಿ ನಿಂದನೆ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಎನ್.ಪ್ರಭುದೇವ್ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬೆಂಗಳೂರು ವಿವಿಯ ಎಂಜಿನಿಯರ್ ಎನ್.ಪುಟ್ಟಸ್ವಾಮಿ ದೂರು ನೀಡಿದವರು.ನಾನು ಪರಿಶಿಷ್ಟ ಜಾತಿಯವನು ಎಂಬ ಕಾರಣಕ್ಕೆ ಪ್ರಭುದೇವ್ ಅವರು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ನನ್ನ ಅಧಿಕಾರವನ್ನು ಕಿತ್ತುಕೊಂಡಿದ್ದಾರೆ ಹಾಗೂ ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ. ಅವರ ಇಂತಹ ವರ್ತನೆಯಿಂದ ನನಗೆ ಹೃದಯಾಘಾತವಾಯಿತು ಎಂದು ಪುಟ್ಟಸ್ವಾಮಿ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದರು.ಘಟನೆ ಸಂಬಂಧ ಗುರುವಾರ (ಮಾ.1) ಪುಟ್ಟಸ್ವಾಮಿ ಅವರ ಮಗ ಪಿ.ಮಾಕೇಶ್ ದೂರು ನೀಡಿದ್ದರು. ಆದರೆ, ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ಪುಟ್ಟಸ್ವಾಮಿ ಅವರು ಭಾನುವಾರ ಪುನಃ ದೂರು ನೀಡಿದರು.

ಇದರಿಂದ ಕುಲಪತಿ ವಿರುದ್ಧ ಪೊಲೀಸರು ಜಾತಿನಿಂದನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.