ಬೆಂಗಳೂರು: ಸಂಶೋಧನಾ ವಿದ್ಯಾರ್ಥಿ ವೇಮುಲ ರೋಹಿತ್ ಅವರ ಆತ್ಮಹತ್ಯೆಗೆ ಕಾರಣರಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕೃಷಿ ವಿಶ್ವವಿದ್ಯಾಲ ಯದ ಡಾ.ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿಸಂಘ ಹಾಗೂ ವಿವಿಧ ದಲಿತ ಸಂಘಟನೆಗಳ ಸದಸ್ಯರು ಜಿಕೆವಿಕೆ ಗೇಟ್ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.

ಕೃಷಿ ವಿಶ್ವವಿದ್ಯಾಲಯದ ನಾಯಕ್ ಭವನದಿಂದ ಘೋಷಣೆಗಳನ್ನು ಕೂಗುತ್ತ, ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು, ಜಿಕೆವಿಕೆ ಗೇಟಿನವರೆಗೆ ಆಗಮಿಸಿ ಸಭೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ವಿಶ್ವವಿದ್ಯಾಲಯಗಳಲ್ಲಿ ವಿಶೇಷವಾಗಿ ಸಂಶೋಧನಾ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.