ಸೋಮವಾರ, ಜೂನ್ 21, 2021
30 °C

ಕುಶಾಲನಗರದಲ್ಲಿ ದೇಹದಾರ್ಢ್ಯ ಚಾಂಪಿಯನ್‌ಷಿಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಮಿ. ಕರ್ನಾಟಕ-2012~ ಪ್ರಶಸ್ತಿಗಾಗಿ ರಾಜ್ಯ ದೇಹದಾರ್ಢ್ಯ ಚಾಂಪಿಯನ್‌ಷಿಪ್ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾರ್ಚ್ 31ಹಾಗೂ ಏಪ್ರಿಲ್ 1 ರಂದು ನಡೆಯಲಿದೆ.ರಾಜೇಶ್ ಗುಂಡೂರಾವ್ ಅಧ್ಯಕ್ಷರಾಗಿರುವ ಕೂರ್ಗ್ ಬಾಡಿಬಿಲ್ಡಿಂಗ್ ಮತ್ತು ಫಿಟ್‌ನೆಸ್ ಸಂಸ್ಥೆ ಆಶ್ರಯದಲ್ಲಿ ನಡೆಯುವ ಚಾಂಪಿಯನ್‌ಷಿಪ್‌ನಲ್ಲಿ ಒಟ್ಟು ಒಂಬತ್ತು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ದೇಹದಾರ್ಢ್ಯ ಮತ್ತು ಫಿಟ್‌ನೆಸ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.ಏಪ್ರಿಲ್ 20 ರಿಂದ 22ರ ವರೆಗೆ ಬೀದರ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಸೀನಿಯರ್ ದೇಹದಾರ್ಢ್ಯ ಚಾಂಪಿಯನ್‌ಷಿಪ್‌ಗೆ ರಾಜ್ಯ ತಂಡದ ಆಯ್ಕೆ ಇದೇ ವೇಳೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ವಿವರಗಳಿಗೆ ಬೆಟ್ಟೇಗೌಡ, ಅಧ್ಯಕ್ಷರು (ಮೊಬೈಲ್ ನಂಬರ್ 9845697584) ಇವರನ್ನು ಸಂಪರ್ಕಿಸಿ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.