ಭಾನುವಾರ, ಮೇ 9, 2021
24 °C

ಕುಶಾಲನಗರ: ಮರಳು ಲಾರಿ ತಡೆದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ: ಉತ್ತರ ಕೊಡಗಿನ ಗಡಿ ಗ್ರಾಮವಾದ ಶಿರಂಗಾಲದ ಕಾವೇರಿ ನದಿಯಿಂದ ನಿಯಮ ಬಾಹಿರವಾಗಿ ಮರಳು ಸಾಗಾಣಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಬುಧವಾರ ಪಟ್ಟಣದಲ್ಲಿ ಮರಳು ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸಿದರು.ಸಾರ್ವಜನಿಕರು ಇಲ್ಲಿಯ ಸೋಮನಾಥೇಶ್ವರ ದೇವಸ್ಥಾನದ ಬಳಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದರು.ಕೆಲವರು ಪರ್ಮಿಟ್‌ಗಿಂತ ಹೆಚ್ಚುವರಿ ಮರಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವ ಮೂಲಕ ಸರ್ಕಾರಕ್ಕೆ ವಂಚಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.ಅಕ್ರಮ ಮರಳು ದಂಧೆಯಲ್ಲಿ ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ ಕೂಡ ಶಾಮೀಲಾಗಿವೆ ಎಂದು ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಎಸ್.ಅಶೋಕ್ ಮತ್ತಿತರರು ದೂರಿದರು

ಪ್ರತಿಭಟನೆಯಲ್ಲಿ ಪುಲಿಯಂಡ ರಾಮು, ಹೇಮಂತ್, ಪವನ್ ಕುಮಾರ್, ಪ್ರಸಾದ್ ರೈ ಮತ್ತಿತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.