ಶುಕ್ರವಾರ, ಮೇ 27, 2022
27 °C

ಕುಷ್ಟಗಿ: ಉಚಿತ ನೇತ್ರ ಶಸ್ತ್ರಚಿಕಿತ್ಸೆ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ: ಪಟ್ಟಣದಲ್ಲಿ ಸೊಮವಾರ ರಕ್ಷಣಾವೇದಿಕೆ (ಟಿಎಎನ್) ಬಣದ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಆರಂಭಗೊಂಡಿದ್ದು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂರಕ್ಕೂ ಅಧಿಕ ಜನರಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಅಂಧತ್ವ ವಿಭಾಗ, ಬೆಂಗಳೂರಿನ ಪ್ರಾಜೆಕ್ಟ್ ದೃಷ್ಟಿ ಸೋಲಂಕಿ ಕಣ್ಣಾಸ್ಪತ್ರೆ ಹಾಗೂ ತಾವರಗೇರಾದ ಬೆಳಕು ಸೇವಾ ಸಂಸ್ಥೆ ಹಾಗೂ ಸ್ಥಳೀಯ ಸಾರ್ವಜನಿಕ ಆಸ್ಪತ್ರೆ ವೈದ್ಯರ ಸಹಕಾರದೊಂದಿಗೆ ಹೊಲಿಗೆ ರಹಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಲೆನ್ಸ್ (ಐಒಎಲ್) ಅಳವಡಿಸುವ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಸಹ ತಪಾಸಣೆ ನಡೆಯಲಿದೆ ಎಂದು ತಿಳಿಸಲಾಗಿದೆ.ಶಿಬಿರದ ಸಮಾರೋಪ ಕಾರ್ಯಕ್ರಮ ಅ.11ರಂದು ಸಂಜೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಡೆಯಲಿದ್ದು ವೈದ್ಯರು, ಚುನಾಯಿತ ಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗಹಿಸುವರು ಎಂದು ಕರವೇ ಜಿಲ್ಲಾಧ್ಯಕ್ಷ ಬಸನಗೌಡ ಪಾಟೀಲ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.