ಸೋಮವಾರ, ಜೂನ್ 21, 2021
21 °C

ಕುಷ್ಟಗಿ ತಾ.ಪಂ. ಕಚೇರಿ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ: ಇಲ್ಲಿಯ ತಾಲ್ಲೂಕು ಪಂಚಾಯಿತಿ ಕಚೇರಿ ಸಾಮಗ್ರಿಗಳನ್ನು ಸೋಮವಾರ ಜಪ್ತಿ ಮಾಡಲಾಯಿತು. ವಸತಿ ಯೋಜನೆಗೆ ಸಂಬಂಧಿಸಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಹೆಚ್ಚುವರಿ ಪರಿಹಾರವನ್ನು ಮಾಲೀಕರಿಗೆ ಪಾವತಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.ನ್ಯಾಯಾಲಯದ ಸಿಬ್ಬಂದಿ ಜಪ್ತಿ ವಾರಂಟ್‌ನೊಂದಿಗೆ ಆಗಮಿಸಿ ತಾ.ಪಂ. ಕಚೇರಿಯ ಜೀಪ್, ಫ್ಯಾಕ್ಸ್, ಜೆರಾಕ್ಸ್ ಯಂತ್ರಗಳು, ಐದು ಕಂಪ್ಯೂಟರ್‌ಗಳು, ಜನರೇಟರ್, ಸ್ಕ್ಯಾನರ್, ಬ್ಯಾಟರಿಗಳನ್ನು ಜಪ್ತಿ ಮಾಡಿದರು. ಬಳಿಕ ಅವುಗಳನ್ನೆಲ್ಲ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.