ಬುಧವಾರ, ಜೂನ್ 23, 2021
29 °C

ಕುಸಿದ ಆಡಳಿತ ಯಂತ್ರ: ಖರ್ಗೆ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಳೆಹೊನ್ನೂರು: ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲಿ ತೊಡಗಿರುವ ರಾಜ್ಯ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.ಇಲ್ಲಿನ ಬ್ಲಾಕ್ ಕಾಂಗ್ರೆಸ್ ಭಾನುವಾರ ಬಸ್‌ನಿಲ್ದಾಣದ ಸಮೀಪ ಆಯೋಜಿಸಿದ್ದ ಲೋಕಸಭಾ ಉಪ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್‌ಹೆಗ್ಡೆ ಪರ ಅವರು ಮತಯಾಚಿಸಿ ಮಾತನಾಡಿದರು.ಆಯೋಧ್ಯೆಯಲ್ಲಿ ರಾಮಮಂದಿರ ಕಟ್ಟುತ್ತೇವೆಂದು ರಾಷ್ಟ್ರವ್ಯಾಪಿ ಸಂಗ್ರಹಿಸಿದ ಹಣ ಎಲ್ಲಿ ಹೋಯಿತು. ರಾಮನ ಹೆಸರಿನಲ್ಲಿ ಹಣ, ಇಟ್ಟಿಗೆ ಸಂಗ್ರಹಿಸಿ ಜನರಲ್ಲಿ ಧಾರ್ಮಿಕ ಭಾವನೆ ಮೂಡಿಸಿ ಅಧಿಕಾರದಾಹದಲ್ಲಿ ರಾಮನನ್ನೇ ಮರೆತವರು ಬಿಜೆಪಿಯವರು ಎಂದು ಛೇಡಿಸಿದರು.ರಾಜ್ಯದಲ್ಲಿ ಕೇಂದ್ರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಕೇಂದ್ರದ ಯೋಜನೆಗಳು ವಾಪಾಸ್ ಹೋಗುತ್ತಿವೆ. ಕೂಲಿ ಕಾರ್ಮಿಕರು, ದೀನದಲಿತರ ಬಗ್ಗೆ ಕಾಳಜಿ ವಹಿಸದ ಸರ್ಕಾರಕ್ಕೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಅವರು ಮನವಿ ಮಾಡಿದರು.ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹುಲಿ ಯೋಜನೆ ಜಾರಿಗೆ ಗ್ರಾಮೀಣ ಜನರಿಗೆ ಆತಂಕವನ್ನುಂಟು ಮಾಡಿ ಜನರೆದುರು ನಾಟಕವಾಡುತ್ತಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ರಾಜ್ಯ ರಾಜಕಾರಣಕ್ಕೆ ದಿಕ್ಸೂಚಿ ಮಾಡುವಂತೆ ಕರೆ ನೀಡಿದರು.ನರಸಿಂಹರಾಜಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಎಸ್.ಎಂ.ಆನಂದ್, ಎಐಸಿಸಿ ಮಹಿಳಾ ಕಾರ್ಯದರ್ಶಿ ಬಿ.ಸಿ.ಗೀತಾ, ಎಂ.ಎಸ್.ಚನ್ನಕೇಶವ್, ಟಿ.ಡಿ.ರಾಜೇಗೌಡ, ಶಶಿಕಲಾ ಉಮೇಶ್, ಮಹಮ್ಮದ್ ಇಫ್ತೆಖಾರ್ ಆದಿಲ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.