ನವದೆಹಲಿ: ಉದ್ದೀಪನಾ ಮದ್ದು ಸೇವಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕುಸ್ತಿಪಟು ನರಸಿಂಗ್ ಯಾದವ್ ಅವರಿಗೆ ನಾಡಾ (ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ) ಸೋಮವಾರ ಕ್ಲೀನ್ಚಿಟ್ ನೀಡಿದೆ.

ಇದೀಗ ನರಸಿಂಗ್ ಯಾದವ್ ಆರೋಪ ಮುಕ್ತನಾಗಿದ್ದು, ರಿಯೊ ಒಲಿಂಪಿಕ್ಸ್ ನಲ್ಲಿ ಭಾಗವಹಿಸಬಹುದಾಗಿದೆ ಎಂದು ನಾಡಾ ಹೇಳಿದೆ.

2015ರಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ಷಿಪ್ನ ಪುರುಷರ 74 ಕೆ.ಜಿ. ವಿಭಾಗದಲ್ಲಿ ಕಂಚು ಗೆದ್ದು ಯಾದವ್ ರಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದುಕೊಂಡಿದ್ದರು. ಈ ನಡುವೆ ನರಸಿಂಗ್ ಅವರು ನಿಷೇಧಿತ ಉದ್ದೀಪನಾ ಮದ್ದು ಸೇವಿಸಿದ್ದಾರೆ ಎಂದು ಆರೋಪ ಕೇಳಿಬಂದಿತ್ತು.

ನರಸಿಂಗ್ ಅವರ ಮೂತ್ರದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷೆಯ ವೇಳೆ ಅದರಲ್ಲಿ ನಿಷೇಧಿತ ಉದ್ದೀಪನಾ ಮದ್ದಿನ ಅಂಶ ಇರುವುದು ಪತ್ತೆಯಾಗಿದೆ ಎಂದು ನಾಡಾ ಮಹಾ ನಿರ್ದೇಶಕ ನವೀನ್ ಅಗರವಾಲ್ ಹೇಳಿದ್ದು, ಈ ಹಿನ್ನಲೆಯಲ್ಲಿ ಯಾದವ್ ಅವರನ್ನು ವಿಚಾರಣೆಗೊಳಪಡಿಸಲಾಗಿತ್ತು.

ಇದೀಗ ವಿಚಾರಣೆ ಪೂರ್ಣಗೊಂಡಿದ್ದು, ನರಸಿಂಗ್ ಮೂತ್ರದ ಮಾದರಿಯನ್ನು ಪರೀಕ್ಷೆಗೊಳಪಡಿಸಿದಾಗ ಉದ್ದೀಪನಾ ಮದ್ದು ಸೇವನೆ ಬಗ್ಗೆ ಪಾಸಿಟಿವ್ ಫಲಿತಾಂಶ ಕಂಡು ಬಂದಿಲ್ಲ ಎಂದು ಅಗರವಾಲ್ ಸೋಮವಾರ ತೀರ್ಪು ಪ್ರಕಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.