ಗುರುವಾರ , ಏಪ್ರಿಲ್ 15, 2021
31 °C

ಕುಸ್ಮಾಅಧ್ಯಕ್ಷರ ಬಂಧನಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೊಳಿಸದ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಸಂಘ (ಕುಸ್ಮಾ) ವಿರುದ್ಧ  ಕಠಿಣ ಕ್ರಮ ಕೈಗೊಂಡು ಅಧ್ಯಕ್ಷರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಎಸ್‌ಎಫ್‌ಐ ನಗರದಲ್ಲಿ ಪ್ರತಿಭಟನೆ ನಡೆಸಿತು.ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಜಾಥಾ ನಡೆಸಿ ಕುಸ್ಮಾ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯದ ಬಿಜೆಪಿ ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಕೈಗೊಂಬೆಯಾಗಿ ಕಾಯ್ದೆ ಜಾರಿಗೊಳಿಸಲು ಪ್ರಯತ್ನ ನಡೆಸುತ್ತಿಲ್ಲ ಎಂದು ದೂರಿದರು. ಪ್ರಸಕ್ತ ವರ್ಷ ಕಾಯ್ದೆ ಪ್ರಕಾರ 1 ಲಕ್ಷದ 22 ಸಾವಿರ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಪ್ರವೇಶ ಕಲ್ಪಿಸಬೇಕಿತ್ತು, ಆದರೆ ಕೇವಲ 61 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಿದೆ. ವಿದ್ಯಾರ್ಥಿಗಳ ಆಯ್ಕೆಯಲ್ಲಿಯೂ ಕೂಡಾ ವಂಚನೆ ನಡೆದಿದೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಆರೋಪಿಸಿದರು.ಕಾಯ್ದೆ ಜಾರಿಗೊಳಿಸದೇ ಸಂವಿಧಾನ ವಿರೋಧಿಯಾಗಿ ಕುಸ್ಮಾ ವರ್ತಿಸುತ್ತಿದೆ. ಅನುದಾನ ರಹಿತ ಶಾಲೆಗಳ ವರ್ತನೆ ಹಾಗೂ ಅಧ್ಯಕ್ಷರು ನೀಡಿರುವ ಉದ್ಧಟತನದ ಹೇಳಿಕೆ ಸುಪ್ರಿಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದ್ದು,  ಸರ್ಕಾರ ತಕ್ಷಣ ಶಾಲೆಗಳ ವಿರುದ್ಧ  ಕ್ರಮ ಕೈಗೊಳ್ಳಬೇಕು. ಏಕಾಏಕಿ ಶಾಲೆಗಳನ್ನು ಬಂದ್ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವುದು ಸರಿಯಲ್ಲ. ಹೋರಾಟ ಕೈ ಬಿಟ್ಟು ಶಾಲೆಗಳನ್ನು ಕಾರ್ಯಾರಂಭ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾನಿರತತು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾಘಟಕದ ಅಧ್ಯಕ್ಷ ಪೀರು ರಾಠೋಡ, ರಮೇಶ ಅರಹುಣಶಿ, ಬಾಲು ರಾಠೋಡ, ಸುಮಿತ್ರಾ ಸಿಮನ್ನವರ, ಯಲ್ಲವ್ವ ತಲವಾರ, ಅರ್ಪಿತಾ ಜಂತ್ಲಿ, ಸಂಕೇತಾ ಹವಳದ, ಐಶ್ವರ್ಯ ನಂದಿಯಾಲದ, ನೀಲವ್ವ ತಳವಾರ, ಸಂತೋಷ ಬಡಿಗೇರ, ಮಂಜು ಕಲ್ಲೂರ  ಮತ್ತಿತರರು ಪ್ರತಿಭಟನಾ ರ‌್ಯಾಲಿಯಲ್ಲಿ ಭಾಗವಹಿಸಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.