ಶುಕ್ರವಾರ, ಮೇ 14, 2021
22 °C

ಕೂಡಲಸಂಗಮ ವಿವಿ ಸ್ಥಾಪನೆಯಾಗಲಿ: ನಲ್ಲೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: 12 ನೇ ಶತಮಾನದಲ್ಲಿ ವೈಚಾರಿಕ ಕ್ರಾಂತಿಗೆ ಕಾರಣವಾದ ಬಸವಣ್ಣನವರ ಕರ್ಮಭೂಮಿ ಕೂಡಲಸಂಗಮದಲ್ಲಿ ವಿಶ್ವವಿದ್ಯಾನಿಲಯವೊಂದನ್ನು ಸ್ಥಾಪಿಸುವ ಮೂಲಕ ಜಗತ್ತಿಗೇ ಮಾದರಿಯಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಡಾ.ನಲ್ಲೂರ ಪ್ರಸಾದ್ ಅಭಿಪ್ರಾಯಪಟ್ಟರು.ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೂಡಲಸಂಗಮದಲ್ಲಿ ಭಾನುವಾರ ನಡೆದ ವಚನ ಸಾಹಿತ್ಯ ಸಮಾವೇಶದ ಸಮಾರೋಪ ಸಮಾರಂಭದ   ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಹಿತ್ಯ ಪರಿಷತ್‌ನಿಂದ ಸಾಹಿತ್ಯದ ಈಗಾಗಲೇ ಹಳೆಗನ್ನಡ ಸಾಹಿತ್ಯ, ದಾಸ ಸಾಹಿತ್ಯ ಮತ್ತು ವಚನ ಸಾಹಿತ್ಯ ಸಮಾವೇಶವನ್ನು  ರಾಜ್ಯದ ಬೇರೆ ಬೇರೆ ಸ್ಥಳಗಳಲ್ಲಿ ಮಾಡಲಾಗಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ದಲಿತ ಮತ್ತು ಬಂಡಾಯ ಸಾಹಿತ್ಯ ಸಮಾವೇಶ ನಡೆಸುವ ಉದ್ದೇಶವಿದೆ ಎಂದರು.ಡಿಸೆಂಬರ್ 17 ಮತ್ತು  18 ರಂದು  ದೆಹಲಿಯಲ್ಲಿ ಹೊರನಾಡ ಕನ್ನಡಿಗರ ಸಮಾವೇಶ ನಡೆಯಲಿದೆ ಎಂದ ಅವರು, ಸಾಹಿತ್ಯ ಪರಿಷತಿನ ಚಟುವಟಿಕೆಗಳಲ್ಲಿ ಜನಪ್ರತಿನಿಧಿಗಳು ಸಕ್ರೀಯವಾಗಿ ಭಾಗವಹಿಸುವಂತಾಗಬೇಕು  ಎಂದು ಆಶಿಸಿದರು.ಸಾನಿಧ್ಯ ವಹಿಸಿದ್ದ ಬಸವಜಯ ಮೃತ್ಯುಂಜಯ ಸ್ವಾಮಿ ಮಾತನಾಡಿ, ಪ್ರತಿ ವರ್ಷ  ಯಾವುದಾದರೊಂದು ಶರಣರ  ಕ್ಷೇತ್ರದಲ್ಲಿ  ವಚನ ಸಾಹಿತ್ಯ ಸಮಾವೇಶವನ್ನು ಸಾಹಿತ್ಯ ಪರಿಷತ್ ನಡೆಸುವಂತಾಗಲಿ ಎಂದರು.

2012 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಾಗಲಕೋಟೆ, ವಿಜಾಪುರ ಅಥವಾ ಬೀದರ್‌ನಲ್ಲಿ  ಏರ್ಪಡಿಸಲು ಗಮನ ಹರಿಸುವಂತೆ ಮನವಿ ಮಾಡಿದರು.ಸಮಾರಂಭದಲ್ಲಿ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ.ಕೋಟಿ, ಯಲ್ಲೇಗೌಡ ಬೆಸಗರಹಳ್ಳಿ, ಜಿ.ಪಾಟೀಲ   ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ, ಜಿ.ಮಲ್ಲಿಕಾರ್ಜುನಪ್ಪ ಹಾಗೂ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.